

ಕಾರ್ಕಳ, ಆ.20: ಜೀವನದಲ್ಲಿ ನೊಂದ ಮಹಿಳೆಯರ ಧ್ವನಿಯಾಗಿ ಆಯಾ ತಾಲೂಕು ಕೇಂದ್ರಗಳಲ್ಲಿ ಮಹಿಳಾ ಸಾಂತ್ವನ ಕೇಂದ್ರವನ್ನು ಈ ಹಿಂದೆ ಸರ್ಕಾರ ಸ್ಥಾಪಿಸಿತ್ತು. NGO ಮೂಲಕ ನಡೆಯುತ್ತಿರುವ ಸಾಂತ್ವನ ಕೇಂದ್ರದಲ್ಲಿ ಆಪ್ತ ಸಮಾಲೋಚಕರು ಹಾಗೂ ಸಹಾಯಕರು ಕಾರ್ಯನಿರ್ವಹಿಸುತ್ತಾರೆ. ಆದರೆ ಕಾರ್ಕಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷರು ವಿನಾಕಾರಣ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆರೋಪಿಸಿದ್ದಾರೆ.
ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೇವಲ 2 ನೇ ತರಗತಿ ಕಲಿತ ಒಕ್ಕೂಟದ ಮಹಿಳಾ ಅಧ್ಯಕ್ಷರು ಕಾರ್ಕಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿ MSW ಕಲಿತ ಸಮಾಲೋಚಕರ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದಲ್ಲದೇ ನ್ಯಾಯ ಕೇಳಿ ಬರುವ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸುತ್ತಾರೆ.ಶಿಶುಪಾಲನಾ ಘಟಕ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಇದಲ್ಲದೇ ಸಾಂತ್ವನ ಕೇಂದ್ರದ ಕಟ್ಟಡದಲ್ಲಿನ 3 ವಾಣಿಜ್ಯ ಮಳಿಗೆಗಳನ್ನು ಅನಧಿಕೃತವಾಗಿ ಬಾಡಿಗೆಗೆ ನೀಡಿ ಹಣದ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಆದ್ದರಿಂದ NGO ಅಧೀನದಲ್ಲಿ ಇರುವ ಸಾಂತ್ವನ ಕೇಂದ್ರವನ್ನು ಸರ್ಕಾರವೇ ನಡೆಸಬೇಕು. ಹಾಗೂ ಪ್ರತೀ 5 ವರ್ಷಗಳಿಗೊಮ್ಮೆ ಅಧ್ಯಕ್ಷರನ್ನು ಬದಲಾಯಿಸಬೇಕು. ಮುಖ್ಯವಾಗಿ CDPO ಅವರು ಮಹಿಳಾ ಸಾಂತ್ವನ ಕೇಂದ್ರದ ಮೇಲುಸ್ತುವಾರಿ ನೋಡಿಕೊಂಡು ಮಹಿಳೆಯರ ಕುಂದುಕೊರತೆಗಳನ್ನು ಆಲಿಸಬೇಕು.ಒಕ್ಕೂಟದ ಅಧ್ಯಕ್ಷರಿಗೆ ಕೇವಲ ನಿರ್ವಹಣೆ ಜವಾಬ್ದಾರಿ ಮಾತ್ರವೇ ಹೊರತು ಸಾಂತ್ವನ ಕೇಂದ್ರದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ರಮಿತಾ ಹೇಳಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
