

ಕುಂದಾಪುರ,ಆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕುಂದಾಪುರ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಮಹೇಂದ್ರ ಶೆಟ್ಟಿ ಎಂಬಾತ ಹಲ್ಲೆ ನಡೆಸಿದ ಘಟನೆ ಕುಂದಾಪುರದ ಹೊಟೇಲ್ ಒಂದರಲ್ಲಿ ಶುಕ್ರವಾರ ನಡೆದಿದೆ.
ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿ ಮಾಡಿದ್ದಾರೆ ಎಂಬ ಸಿಟ್ಟಿನಿಂದ ಅಲ್ಲಿನ ವೈದ್ಯಾಧಿಕಾರಿ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಕುಂದಾಪುರದ ಹೊಟೇಲ್ ನಲ್ಲಿ ಪತ್ನಿಯೊಂದಿಗೆ ಉಪಹಾರ ಸೇವಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಮಹೇಂದ್ರ ಶೆಟ್ಟಿ ಹಲ್ಲೆ ನಡೆಸಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆ ಕುರಿತು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದ್ದು, ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ
ಸುಬ್ರಹ್ಮಣ್ಯ ಜಿ ಕುರ್ಯ ಒತ್ತಾಯಿಸಿದ್ದಾರೆ.
ಇದಲ್ಲದೇ ತಪ್ಪಿತಸ್ಥ ವೈದ್ಯನನ್ನು ತಕ್ಷಣವೇ ಅಮಾನತು ಮಾಡಿ ಆತನನ್ನು ಬಂಧಿಸುವಂತೆ ಜಿಲ್ಲಾ ಸಂಘ ಆಗ್ರಹಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
