

ಬೆಂಗಳೂರು, ಆ. 24: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮೊದಲ ಕರಡು ಮತದಾರರ ಪಟ್ಟಿಯನ್ನು ಇಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಪ್ರಕಟಿಸಲಿದ್ದಾರೆ. ಈ ಮೂಲಕ SIR ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರು ಉಳಿದಿದ್ದಾರೆ ಮತ್ತು ಯಾರು ಇರುವುದಿಲ್ಲ ಎಂಬುದು ಬಹಿರಂಗಗೊಳ್ಳಲಿದೆ.
ಕರಡು ಮತದಾರರ ಪಟ್ಟಿ ಪ್ರಕಟವಾದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ನೀಡಿದೆ. ಇದರ ಭಾಗವಾಗಿ, ಲಕ್ಷಾಂತರ ಮತದಾರರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು ಮತದಾರರ ಮನೆಗಳಿಗೆ ತೆರಳಿ ನೋಟಿಸ್ಗಳನ್ನು ಹಸ್ತಾಂತರಿಸಲಿದ್ದಾರೆ. ಈಗಾಗಲೇ ಡಿಜಿಟಲೀಕರಣಗೊಂಡ 4.44 ಕೋಟಿ ಮತದಾರರ ಪೈಕಿ ಸುಮಾರು 43,80,740 ಮತದಾರರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ. ಆಗಸ್ಟ್ 27ರಿಂದ ಮತದಾರರಿಗೆ ನೋಟಿಸ್ ನೀಡಲು ಆಯೋಗ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸಹಕಾರಿಯಾಗಲಿದೆ.





.
.
.
.
.
.
.
.
.
.
.
.
.
.
.
.
.
.
.
.
