

ಬೆಂಗಳೂರು, ಆ.24: ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಫ್ರೀಡಂ ಪಾರ್ಕ್ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಪಕ್ಷವು ಯೋಜನೆ ರೂಪಿಸಿದೆ. ಕಳೆದ ಒಂದು ವಾರದಿಂದ ಅಧಿವೇಶನ ಸಂದರ್ಭದಲ್ಲಿ ಸದನದ ಒಳಗೆ ಮತ್ತು ಹೊರಗೆ ಈ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ ಹೋರಾಟ ನಡೆಸಿದೆ. ಇದೀಗ ಈ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯಲು ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಅಖಾಡ ಸಜ್ಜುಗೊಳಿಸಿದ್ದಾರೆ.
ನಾಯಕರಾದ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್, ಮತ್ತು ಪ್ರೀತಂ ಗೌಡ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿವೆ. ಪ್ರತಿಭಟನೆಗೆ ಬೆಂಗಳೂರು ನಗರದ ಪ್ರತೀ ವಿಧಾನಸಭಾ ಕ್ಷೇತ್ರದಿಂದ ತಲಾ 200 ಕಾರ್ಯಕರ್ತರನ್ನು ಕರೆತರಲು ನಾಯಕರು ಸೂಚನೆ ನೀಡಿದ್ದಾರೆ. ಜೆಡಿಎಸ್ ಸಹ ಈ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ.
ಬಿಜೆಪಿ ಜೆಡಿಎಸ್ ಪ್ರತಿಭಟನೆ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ವಿಧಾನಸೌಧ ಸುತ್ತಮುತ್ತಲಿನ ಭದ್ರತೆಗಾಗಿ 1 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
