

ಬ್ರಹ್ಮಾವರ,ಆ23: ಹೆತ್ತ ತಾಯಿ-ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧೀ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಈ ಭೀಭತ್ಸ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಕೊಲೆಯಾದ ದುರ್ದೈವಿಗಳು. ದಂಪತಿಯನ್ನು ಕೊಲೆಗೈದ ಆರೋಪಿ ಮಗ ಶಾಹಿದ್ ಅಲಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಮೆಹಬೂಬ್ ಅಲಿ ಅವರು ಲಾರಿ ಚಾಲಕರಾಗಿ ದುಡಿಯುತ್ತಿದ್ದರು. ಆರೋಪಿ ಮಗ ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ತಂದೆ ತಾಯಿ ದಿನನಿತ್ಯ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನುವ ಕಾರಣಕ್ಕಾಗಿ ಹತ್ಯೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
