

ಕಾರ್ಕಳ,ಆ.27: ಕಾರ್ಕಳದ ಇತಿಹಾಸ ಪ್ರಸಿದ್ಧ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಗೋಪಾಲಕೃಷ್ಣ ರಾವ್(91) ಅವರು ವಯೋಸಹಜ ಕಾಯಿಲೆಯಿಂದ ನಿಧನರಾದರು.
ಹಿರಿಯರಾದ ಗೋಪಾಲಕೃಷ್ಣ ರಾವ್ ಅವರು ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾಗಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಅತ್ಯುತ್ತಮ ಸಹಕಾರ ನೀಡಿದ್ದರು.ಇದಲ್ಲದೇ ಕಳೆದ 2023 ರಲ್ಲಿ ಅವರ ಮಾರ್ಗದರ್ಶನದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ನಡೆದಿತ್ತು. ಮಹಾನ್ ಧರ್ಮ ನಿಷ್ಠರೂ ಹಾಗೂ ಪರಮ ದೈವ ಭಕ್ತರಾಗಿದ್ದು ಧರ್ಮ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
