

ಯಾದಗಿರಿ,ಆ.28: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಯಾದಗಿರಿ ಉಪನಿರ್ದೇಶಕ ಶಾಲಾ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಹುನಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಸುರಪುರ ತಾಲೂಕಿನ ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ್ ಅಮಾನತುಗೊಂಡವರಾಗಿದ್ದಾರೆ.ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶ ಜಾರಿಯಲ್ಲಿರಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದ್ದು, ಶಿಕ್ಷಕರು RSS ಪಥಸಂಚಲನದಲ್ಲಿ ಪಾಲ್ಗೊಂಡಿರುವುದು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ಹಲವು ನಿಯಮಗಳ ಉಲ್ಲಂಘನೆಯಾಗಬಹುದು ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.ಶಿಕ್ಷಕರ ಪಾಲ್ಗೊಳ್ಳುವಿಕೆ ಮೇಲ್ನೋಟಕ್ಕೆ ಕರ್ತವ್ಯಲೋಪಕ್ಕೆ ಸಮಾನವಾಗಿದ್ದು, ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
