

ಕಾರ್ಕಳ, ಆ.31: ರಕ್ತದೊತ್ತಡ ಹಾಗೂ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮೂತ್ರವಿಸರ್ಜನೆಗೆಂದು ಹೊರಗಡೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಉ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕರುಣಾಕರ ಆರ್. ನಾಯ್ಕ್ (54) ಮೃತಪಟ್ಟವರು. ಅವರು ಆ 8ರಂದು ಮುಂಜಾನೆ ಅಂಗಳದಲ್ಲಿ ಕಾಲು ಜಾರಿ ಬಿದ್ದು ತಲೆಗೆ ಗಾಯಗೊಂಡು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
