

ಕಾರ್ಕಳ, ಸೆ. 02: ವಿಷ ಸೇವಿಸಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕಿನ ಹೆರ್ಮುಂಡೆಯ ನಿವಾಸಿ ಉದಯ ನಾಯ್ಕ್(52) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ಆ. 22 ರಂದು ವಿಷ ಸೇವಿಸಿದ್ದ ಉದಯ ನಾಯ್ಕ್ ಅವರನ್ನು ತಕ್ಷಣವೇ ಉಡುಪಿಯ ಖಾಸಗಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಹದಗೆಟ್ಟ ಕಾರಣದಿಂದ ಸೆ. 01 ರಂದು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
