

ಕಾರ್ಕಳ,ಸೆ.02: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿ ಬಳಿ ಕಾರು ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಈ ಭೀಕರ ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು,ಕ್ಯಾಂಟರ್ ಪಲ್ಟಿಯಾಗಿದೆ. ಮೈಸೂರಿನಿಂದ ಉಡುಪಿಗೆ ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಕಾರ್ಕಳದಿಂದ ಬೆಳ್ಮಣ್ ಮಾರ್ಗವಾಗಿ ಅತಿವೇಗವಾಗಿ ಹೋಗುತ್ತಿವೇಳೆ ಪರಪ್ಪಾಡಿ ಬಳಿ ನಿಟ್ಟೆ ಕಡೆಯಿಂದ ಕಾರ್ಕಳಕ್ಕೆ ಬರುತ್ತಿದ್ದ ಮಾರುತಿ ಆಲ್ಟೋ ಕಾರಿಗೆ ಮುಖಾಮುಖಿ ಅಪ್ಪಳಿಸಿದೆ.ಅಪಘಾತದ ರಭಸಕ್ಕೆ ಆಲ್ಟೋ ಕಾರು ಜಖಂಗೊಂಡಿದ್ದು, ಕ್ಯಾಂಟರ್ ಪಲ್ಟಿಯಾಗಿ ಕಲ್ಲಂಗಡಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿವೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಕ್ಯಾಂಟರ್ ಹಾಗೂ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
