

ಮೈಸೂರು,ಸೆ.03: ಬಿಪಿಎಲ್ ಪಡಿತರ ಚೀಟಿ ಪಡೆಯಲು ನಿಗದಿಗೊಳಿಸಿರುವ ಮಾನದಂಡಗಳ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಅವರು ಮೈಸೂರು ಭೇಟಿ ವೇಳೆ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, 4.5 ಕೋಟಿ ಜನರಿಗೆ ಸೌಲಭ್ಯ ವಿತರಿಸುತ್ತಿರುವ ಇಲಾಖೆಯ ಜವಾಬ್ದಾರಿ ಸ್ವೀಕರಿಸಿದ್ದು, ಸ್ವಲ್ಪ ಸಮಯದಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡಬೇಕಿದೆ. ಈಗ ರದ್ದು ಮಾಡಲಾಗಿರುವ ಕಾರ್ಡ್ಗಳನ್ನು ಮರು ಪರಿಶೀಲನೆ ಮಾಡಲಾಗುತ್ತಿದೆ. ಯಾವುದೇ ಕಾರ್ಡ್ ರದ್ದು ಮಾಡದಂತೆ ಸೂಚನೆ ಕೊಡಲಾಗಿದೆ. ಅನ್ನಭಾಗ್ಯ ಯೋಜನೆ ಆರಂಭಗೊAಡು 14 ವರ್ಷಗಳಾಗಿದೆ. ಬಡವರು ಬಿಪಿಎಲ್ ಕಾರ್ಡ್ನಿಂದ ವಂಚಿತರಾಗಬಾರದು ಮತ್ತು ಯಾರೊಬ್ಬರೂ ಹಸಿವಿನಿಂದ ಮಲಗಬಾರದು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಶ್ರಮಿಸುತ್ತೇವೆ ಎಂದರು.
ಗೋದಾಮುಗಳನ್ನು ಸಿಸಿಟಿವಿ ಅವಳಡಿಕೆ, ಪಡಿತರಕ್ಕೆ ಬಿಗಿ ಭದ್ರತೆ
ರಾಜ್ಯದ ಎಲ್ಲ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಕೆ, ಪಡಿತರ ಸಾಗಣೆ ಲಾರಿಗಳಿಗೆ ಜಿಪಿಎಸ್, ಕೇಂದ್ರ ಕಚೇರಿಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್, ನ್ಯಾಯ ಬೆಲೆ ಅಂಗಡಿಗಳಲ್ಲಿಎಲೆಕ್ಟ್ರಾನಿಕ್ ತೂಕದ ಯಂತ್ರ, ಬಯೋಮೆಟ್ರಿಕ್ ವ್ಯವಸ್ಥೆಯಡಿ ಪಡಿತರ ವಿತರಣೆ, ಫಲಾನುಭವಿಗಳು ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಜೊತೆಗೆ ಸರ್ವರ್ ಸಮಸ್ಯೆ ಇತ್ಯರ್ಥಕ್ಕೆ ಮೂರನೇ ಏಜೆನ್ಸಿಯ ಸೇವೆಯನ್ನು ಪಡೆಯಲಾಗಿದೆ. ಪಡಿತರ ವಿತರಣೆ ಅಂಗಡಿಯವರಿಗೆ ಅದಕ್ಕಾಗಿಯೇ ಪ್ರತ್ಯೇಕ ಸಿಮ್ ಹಾಗೂ ಉಪಕರಣವನ್ನು ನೀಡಲಾಗುವುದು. ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ವರ್ಗಾವಣೆ ಮತ್ತು ದುರುಪಯೋಗ ತಡೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಪಡಿತರ ವಿತರಣೆಯಲ್ಲಿನ ಅಕ್ರಮಗಳ ಕುರಿತು ಕಿಡಿಕಾರಿದ ಅವರು, ಕಾಳಸಂತೆಯಲ್ಲಿ ಆಹಾರ ಧಾನ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕಳೆದ 3 ವರ್ಷಗಳಲ್ಲಿ 1497 ಎಫ್‌ಐಆರ್ ದಾಖಲಿಸಿ 86,181 ಕ್ವಿಂಟಾಲ್ ಆಹಾರ ಧಾನ್ಯ ಹಾಗೂ 49.38 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದರು.
ಪಡಿತರ ಚೀಟಿ ವಿರತಣೆ ಕುರಿತು ಮಾತನಾಡಿ ಜೂನ್ 2023ರಿಂದ ಜುಲೈ 31ರವರೆಗೆ ಹೊಸದಾಗಿ 3.70 ಲಕ್ಷ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಆದ್ಯತಾ ಪಡಿತರ ಚೀಟಿಗಾಗಿ ಬಾಕಿ ಇರುವ 1.30 ಲಕ್ಷ ಅರ್ಜಿಗಳ ಪರಿಶೀಲನೆ ಹಾಗೂ ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಇಂದಿರಾ ಕಿಟ್ ವಿತರಣೆ ಬಗ್ಗೆ ಮುಂಬರುವ ದಿನಗಳಲ್ಲಿ ಪರಿಶೀಲನೆ ಮಾಡುತ್ತೆ?ವೆ ಎಂದಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
