

ಹೆಬ್ರಿ, ಸೆ. 04: ಆಗುಂಬೆಯಿಂದ ಹೆಬ್ರಿ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನ ಸೋಮೇಶ್ವರ ಸಮೀಪ ವೇಗವಾಗಿ ಸಂಚರಿಸುವ ವೇಳೆ ರಸ್ತೆ ಬದಿಯ ಕಂದಕಕ್ಕೆ ಉರುಳಿ ಅಪಘಾತ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಘಟನೆ ನಡೆದಿದ್ದು,ಶಿವಮೊಗ್ಗದಿಂದ ಕಾರ್ಕಳ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಅಪಘಾತದಲ್ಲಿ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.
—————–
ಶಿವಮೊಗ್ಗದಿಂದ ಉಡುಪಿ ಕಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕ್‌ಅಪ್ ವಾಹನ ಆಗುಂಬೆಯ 10ನೇ ತಿರುವಿನಲ್ಲಿ ಬ್ರೇಕ್ ವೈಫಲ್ಯದಿಂದ ಅಪಘಾತಕ್ಕೀಡಾಗಿದೆ. ವಾಹನ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
