

ಕಾರ್ಕಳ,ಸೆ.06 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸ.ಪ.ಪೂ.ಕಾಲೇಜು ಬೆಳ್ಮಣ್ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದು, ಬಾಲಕರ ತಂಡ ದ್ವಿತೀಯ ಸ್ಥಾನಿಯಾಗಿಹೊರಹೊಮ್ಮಿದ್ದು, ಸಮರ್ಥ್ ನಾಯ್ಕ್, ವರುಣ್ ಎಸ್.ಜಿ ಮತ್ತು ಅಹನ್ ಜೈನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಛಾಯಾ ಎಸ್ ಶೆಟ್ಟಿ ಮತ್ತು ಅಭಯ್ ಕೋಟಿ ಬೆಸ್ಟ್ ಥ್ರೋವರ್ ಅವಾರ್ಡ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ವಾಲಿಬಾಲ್ನಲ್ಲಿ ಪೂರ್ವಿಕ್ ಬಾಬು ಜಿಲ್ಲಾ ಮಟ್ಟಕ್ಕೆ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಜೇಶ್ವರಿ ಪದವಿ ಪೂರ್ವ ಕಾಲೇಜು ಸಾಣೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪೂರ್ವಿಕ್ ಬಾಬು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿ ಶುಭಹಾರೈಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
