

ಬೆಂಗಳೂರು,ಸೆ. 08: ಇಂಜಿನಿಯರಿAಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳಿಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶದಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರ್ಧರಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯು “ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಮಗಳು (ತಿದ್ದುಪಡಿ) ಕರಡು ನಿಯಮ ಅಧಿಸೂಚನೆಯನ್ನು ಹೊರಡಿಸಿದೆ.
ಈ ಹಿಂದೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿದ್ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ 15% ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ ಇನ್ನುಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು/ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡ 7.5 ರಷ್ಟು ಮೀಸಲಾತಿ ಶೇ 50ರ ಅನುಪಾತದಲ್ಲಿ ವಿಂಗಡಿಸಲಾಗಿದೆ.
ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇ. 7.5 ರಷ್ಟು ಸೀಟುಗಳು ಮೀಸಲಿರಲಿವೆ. ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026 ಅಧಿಸೂಚನೆ ಇದಾಗಿದ್ದು,ಕರಡು ನಿಯಮಕ್ಕೆ ಆಕ್ಷೇಪಣೆ ಮತ್ತು ಸಲಹೆಗಳನ್ನ ಆಹ್ವಾನಿಸಿದೆ.
ಈ ಕರಡು ನಿಯಮಾವಳಿಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಅಥವಾ ಬಾಧಿತ ವ್ಯಕ್ತಿಗಳು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಅಧಿಸೂಚನೆ ಪ್ರಕಟವಾದ ದಿನಾಂಕದಿAದ 15 ದಿನಗಳ ಒಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು (ಎಂ.ಎಸ್. ಬಿಲ್ಡಿಂಗ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001) ಇವರಿಗೆ ಲಿಖಿತ ರೂಪದಲ್ಲಿ ಕಳುಹಿಸಬಹುದಾಗಿದೆ. ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ನಿಯಮಗಳು ಅಂತಿಮವಾಗಿ ಜಾರಿಗೆ ಬರಲಿವೆ.





.
.
.
.
.
.
.
.
.
.
.
.
.
.
.
.
.
.
.
.
