

ಉಡುಪಿ,ಸೆ.09: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್‌ಬಾಲ್ ಪಂದ್ಯಾಟವು ಸೆ.8ರಂದು ಮಂಗಳವಾರದAದು ನಡೆಯಿತು.
ಮಣಿಪಾಲ ಮಾಹೆಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕೆಂಪರಾಜ್ ಎಚ್.ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ನಮ್ಮನ್ನು ಸ್ವಾಸ್ಥ್ಯ, ಸದೃಢ, ಉತ್ತಮ ವ್ಯಕ್ತಿತ್ವದ ನಡೆನುಡಿಯುಳ್ಳ ಆರೋಗ್ಯವಂತ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಕ್ರೀಡೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಹಾಗೂ ಆಟಗಳಲ್ಲಿ ನಮ್ಮನ್ನು ನಾವು ಏಕಾಗ್ರತೆಯಿಂದ ತೊಡಗಿಸಿಕೊಳ್ಳುವುದರಿಂದ ಉತ್ತಮ ಶಿಕ್ಷಣದ ಕಲಿಕೆಗೂ ಕೂಡ ಅದು ಸಹಾಯ ಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ, ಭಾಗವಹಿಸಿ ಮಾತನಾಡಿ ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳೆಲ್ಲರೂ ಶಿಸ್ತು ಸಂಯಮದಲ್ಲಿ ಎಲ್ಲಾ ನಿಯಮಗಳಿಗೆ ಅನುಸಾರವಾಗಿ ಆಟವಾಡಿ, ಉತ್ತಮವಾದ ಪ್ರದರ್ಶನವನ್ನು ನೀಡುವುದರೊಂದಿಗೆ ಗೆಲುವು ನಿಮ್ಮದಾಗಲಿ ಎಂದು ಶುಭಕೋರಿದರು.
ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಕ್ರೀಡಾ ಸಂಯೋಜಕ ಮಂಜುನಾಥ ಜೋಗಿ, ಮಣಿಪಾಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೂಪಾ ಎಲ್. ಭಟ್, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರವಿ ಜಿ ಮತ್ತು ಹೇಮಂತ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ವಂದಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮರೋಪ ಸಮಾರಂಭ
ಸಮಾರೋಪ ಸಮಾರಂಭದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉದ್ಯಮಿ ರಾಜೇಶ್ ಹೆಗ್ಡೆ ಮತ್ತು ಕೋಟ ಸಹಕಾರಿ ಸಂಘದ ಮ್ಯಾನೇಜರ್ ಸಂದ್ಯಾ ರಾಜೇಶ್ ಹೆಗ್ಡೆಅಗಮಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂದ್ಯಾ ರಾಜೇಶ್ ಹೆಗ್ಡೆಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ಇವರು ವಹಿಸಿದ್ದರು.
ಬಾಲಕರ ವಿಭಾಗದಲ್ಲಿ ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿತು. ವಿದ್ಯೋದಯ ಪ.ಪೂ.ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಶಾಮಿಲಿ ಪ.ಪೂ.ಕಾಲೇಜು ಪ್ರಥಮ ಸ್ಥಾನವನ್ನು ಮತ್ತು ಶಾರದ ಪ.ಪೂ.ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.





.
.
.
.
.
.
.
.
.
.
.
.
.
.
.
.
.
.
.
.
