

ಕಾರ್ಕಳ,ಸೆ .11:ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ಬಳಿ ಕಲ್ಲಿನ ಕೋರೆಯಲ್ಲಿ ರಾತ್ರಿವೇಳೆ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲುಗಳನ್ನು ಪುಡಿ ಮಾಡಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸೈ ಪ್ರಸನ್ನ.ಎಂ.ಎಸ್ ನೇತೃತ್ವದ ಪೊಲೀಸರ ತಂಡ ಗುರುವಾರ ರಾತ್ರಿ ದಾಳಿ ನಡೆಸಿ ಇಬ್ಬರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಹರೀಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿ ಎಂಬವರು ಸರ್ಕಾರಕ್ಕೆ ಯಾವುದೇ ರಾಜಧನ ಪಾವತಿಸದೇ ಕಳೆದ ಕೆಲ ಸಮಯದಿಂದ ಅಕ್ರಮ ಕಲ್ಲು ಕೋರೆ ಉದ್ಯಮ ನಡೆಸುತ್ತಿದ್ದು, ನಿರಂತರವಾಗಿ ರಾತ್ರಿವೇಳೆ ಕೇರಳಕ್ಕೆ ಜಲ್ಲಿ ಸಾಗಾಟದ ದಂಧೆ ನಡೆಸುತ್ತಿದ್ದರು. ಈ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಜಲ್ಲಿ ಸಾಗಾಟಕ್ಕೆ ಬಳಸಲಾಗಿದ್ದ ಎರಡು ಟಿಪ್ಪರ್ ಲಾರಿ ಹಾಗೂ ಹಿಟಾಚಿ ಯಂತ್ರಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಹರೀಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
