

ಕಾರ್ಕಳ,ಸೆ.12:ಕರಾವಳಿ ಮತ್ತು ಮಲೆನಾಡಿನ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯಿಂದ ದೇವಸ್ಥಾನದ ತನಕ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಕೆಲವೊಂದು ತಿರುವುಗಳಲ್ಲಿ ವಾಹನಗಳ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಸದರಿ ರಸ್ತೆ ಅಭಿವೃದ್ಧಿಗೆ ಈ ಹಿಂದೆ ಸಂಸದರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ವತಿಯಿಂದ ರೂಪಾಯಿ 18 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಅನುದಾನ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಆದಷ್ಟು ಶೀಘ್ರದಲ್ಲೇ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕರ ಜನಸೇವಾ ಕಛೇರಿ ವಿಕಾಸ ಪ್ರಕಟಣೆಯಲ್ಲಿ ತಿಳಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
