

ಕಾರ್ಕಳ, ಸೆ.14: ಸಾಣೂರು ಗ್ರಾಮದ ಇಂದಿರಾನಗರದಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಮನೆಯ ಆವರಣದ ಬಾವಿಗೆ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯೋಚಿತ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತವಲ್ಲಿ ಯಶಸ್ವಿಯಾಗಿದ್ದಾರೆ
ಇಂದಿರಾನಗರ ನಿವಾಸಿ ಗುರುಪ್ರಸಾದ್ ಕಾಮತ್ (49) ಅವರು ರಾತ್ರಿ ಸುಮಾರು 9.40ರ ವೇಳೆಗೆ ಮನೆಯ ಆವರಣದಲ್ಲಿರುವವನೀರಿರುವ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ. ಘಟನೆ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಾವಿಗೆ ಹಗ್ಗ ಇಳಿಸಿ, ಅದರ ನೆರವಿನಿಂದ ವ್ಯಕ್ತಿಯನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಿದರು. ಕೆಲಕಾಲ ನಡೆದ ಕಾರ್ಯಾಚರಣೆಯ ಬಳಿಕ ಗುರುಪ್ರಸಾದ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತರಲಾಯಿತು.
ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ ದೇವಾಡಿಗ, ಚಂದ್ರಶೇಖರ ಅಚ್ಯುತ ಕರ್ಕೇರ ಅವರ ನೇತೃತ್ವದಲ್ಲಿ ಹರಿಪ್ರಸಾದ್ ಶೆಟ್ಟಿಗಾರ್, ಶ್ರೀಧರ್ ಆತ್ಮೂರು ಹಾಗೂ ಬಸವರಾಜ ಪಾಟೀಲ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.







.
.
.
.
.
.
.
.
.
.
.
.
.
.
.
.
.
.
.
.
