

ಬೆಂಗಳೂರು,ಸೆ.17: ಮದ್ಯದ ನಶೆಯಲ್ಲಿ ಹೈಕೋರ್ಟ್ ಕಲಾಪಕ್ಕೆ ಪದೇ ಪದೆ ಅಡ್ಡಿಪಡಿಸಿ, ನ್ಯಾಯಾಧೀಶರ ವಿರುದ್ಧವೇ ಕೂಗಾಡಿ ಅನುಚಿತವಾಗಿ ವರ್ತಿಸಿದ್ದ 55 ವರ್ಷದ ವಕೀಲ ಪಂಕಜ್ ಕೌಶಿಕ್ ಅವರಿಗೆ ಕರ್ನಾಟಕ ಹೈಕೋರ್ಟ್ ಒಂದು ದಿನದ ಸರಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ವಿಚಾರಣಾ ನ್ಯಾಯಾಲಯದ ವರದಿಯನ್ನು ಆಧರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ. ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಆರೋಪಿ ವಕೀಲ ಕೌಶಿಕ್ ಅವರ ವರ್ತನೆ ಉದ್ದೇಶಪೂರ್ವಕ ಹಾಗೂ ಹಠಮಾರಿತನದಿಂದ ಕೂಡಿದ್ದಾಗಿದೆ ಎಂದು ಪೀಠ ಕಟುವಾಗಿ ಆಕ್ಷೇಪಿಸಿದೆ. ವಕೀಲನ ನಡವಳಿಕೆಯು ಸಾಮಾಜಿಕ, ನೈತಿಕ ಮತ್ತು ನ್ಯಾಯಾಂಗ ನಡವಳಿಕೆಯ ನಿಯಮಗಳನ್ನು ಉಲ್ಲಂಘಿಸಿದAತಿದೆ. ಇಂತಹ ಗಂಭೀರ ಕೃತ್ಯಗಳಿಗೆ ಸೂಕ್ತ ಶಿಕ್ಷೆ ವಿಧಿಸದೇ ಇದ್ದರೆ, ಇಂತಹ ಘಟನೆಗಳು ಪುನರಾವರ್ತನೆಯಾಗುವ ಸಾಧ್ಯತೆಯಿರುತ್ತದೆ. ಇದು ಕಾನೂನಿನ ಆಳ್ವಿಕೆ ಹಾಗೂ ಇಡೀ ನ್ಯಾಯಾಂಗ ವ್ಯವಸ್ಥೆಯ ಸುಗಮ ಕಾರ್ಯನಿರ್ವಹಣೆಗೆ ದೊಡ್ಡ ಅಪಾಯ ತರಲಿದೆ ಎಂದು ನ್ಯಾಯಪೀಠ ತೀವ್ರ ಕಳವಳ ವ್ಯಕ್ತಪಡಿಸಿದೆ.
ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೂ ವಕೀಲ ಕೌಶಿಕ್ ತಮಗಾದ ತಪ್ಪಿನ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಬದಲಾಗಿ, ತಮ್ಮ ಅನುಚಿತ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ್ದಲ್ಲದೆ, ಇಡೀ ನ್ಯಾಯಾಂಗ ಸಂಸ್ಥೆಯ ವಿರುದ್ಧವೇ ಆಧಾರರಹಿತ ಹಾಗೂ ಮಾನಹಾನಿಕರ ಆರೋಪಗಳನ್ನು ಮಾಡಿದ್ದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ನ್ಯಾಯಪೀಠವು ಅವರನ್ನು ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ.





.
.
.
.
.
.
.
.
.
.
.
.
.
.
.
.
.
.
.
.
