

ಹೆಬ್ರಿ, ಸೆ.18 :ಕಸ್ತೂರಿ ರಂಗನ್ ವರದಿಗೆ ಸಂಬAಧಿದAತೆ ಈ ಭಾಗದ ಜನರಿಗೆ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.
ಅವರು ಶುಕ್ರವಾರ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ ಬಾಧಕಗಳ ಕುರಿತು ಶಿವಕುಮಾರ್ ಅವರು ಸ್ಥಳೀಯ ಜನರ ಜೊತೆ ಶುಕ್ರವಾರ ಸಂವಾದ ಸಭೆ ನಡೆಸಿ, ಮಾತನಾಡಿದರು. ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯದ ಬಗ್ಗೆ ಸಮಗ್ರ ವಿವರ ತಿಳಿಸಿದ್ದೀರಿ, ನಿಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನ್ನ ಗಮನ ಸೆಳೆದಿದ್ದೀರಿ. ನಾವು ಈ ತಿಂಗಳ 27ರ ಒಳಗೆ ನಮ್ಮ ತೀರ್ಮಾನ ಕೇಂದ್ರಕ್ಕೆ ಕಳುಹಿಸಬೇಕು. ನಿಮ್ಮ ಅಭಿಪ್ರಾಯ ನಮ್ಮ ಅಭಿಪ್ರಾಯ ಆಗಬೇಕು ಎಂದು ನಾವು ಇಲ್ಲಿಗೆ ಬಂದಿದ್ದೇವೆ. ನೀವೆಲ್ಲರೂ ಕೇರಳ ಮಾದರಿ ಪ್ರಸ್ತಾಪಿಸಿ, ತಜ್ಞರ ಸಮಿತಿಗೆ ಶಿಫಾರಸ್ಸು ಮಾಡಿದ್ದೀರಿ. ನಿಮ್ಮ ಸಲಹೆಗಳನ್ನು ನಾವು ಸ್ವೀಕರಿಸಿದ್ದು, ಈ ವಿಚಾರಗಳ ಕುರಿತು ಚರ್ಚಿಸಲು 3 ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದ್ದು, ರೈತರು, ಬರಗಾಲ ಹಾಗೂ ಕಸ್ತೂರಿ ರಂಗನ್ ವಿಚಾರವಾಗಿ ಚರ್ಚೆ ಮಾಡಲಾಗುವುದು. ಸೋಮವಾರ ಮೊದಲ ದಿನವೇ ಕಸ್ತೂರಿ ರಂಗನ್ ವರದಿ ವಿಚಾರ ಚರ್ಚೆ ಮಾಡಲಾಗುವುದು. ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಭಾಗಕ್ಕೂ ಭೇಟಿ ನೀಡಿ ಅಲ್ಲಿನ ಜನರ ಭಾವನೆಯನ್ನು ಆಲಿಸುವೆ” ಎಂದು ಹೇಳಿದರು ವಿಶೇಷ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ” ಎಂದರು.
ಅರಣ್ಯ ಹಕ್ಕು ಕಾಯ್ದೆಯಲ್ಲಿ ಕೆಲವರಿಗೆ 25 ವರ್ಷ ಹಾಗೂ ಉಳಿದವರಿಗೆ 75 ವರ್ಷ ಆಗಿರಬೇಕು ಎಂದು ನಿಯಮವಿದೆ. ಎಲ್ಲರಿಗೂ 25 ವರ್ಷಗಳ ಮಿತಿಯನ್ನು ನಿಗದಿ ಮಾಡಲು ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ತೊಂದರೆ ನೀಡಬೇಡಿ ಎಂದು ನಾನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವೆ. ಬಗರ್ ಹುಕ್ಕುಂ ಸಾಗುವಳಿ, ಉಳುವವನಿಗೆ ಭೂಮಿ ನೀಡಿರುವುದು ನಮ್ಮ ಸರ್ಕಾರ ಎಂದು ತಿಳಿಸಿದರು.
ಹೆಬ್ರಿಯಲ್ಲಿ ತಾಲ್ಲೂಕು ಆಸ್ಪತ್ರೆಗೆ ಶಾಸಕ ಸುನಿಲ್ ಕುಮಾರ್ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ನಿಮ್ಮ ಮುಂದೆ ಸುಮ್ಮನೆ ಘೋಷಣೆ ಮಾಡಿ ಹೋದರೆ ಸಾಲದು, ಅದು ಅನುಷ್ಟಾನವಾಗಬೇಕು. ಸಿಕ್ಕ ಅವಕಾಶದಲ್ಲಿ ನಿಮಗೆ ಕೈಲಾದಷ್ಟು ಸೇವೆ ಮಾಡುವೆ. ಮುಂದಿನ ದಿನಗಳಲ್ಲಿ ಉಡುಪಿಗೂ ಬಂದು ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡುವೆ ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ತುಳುನಾಡಿನ ಜನರನ್ನು ಕೊಂಡಾಡಿದ ಅವರು, ತುಳುನಾಡಿನ ಜನ ದೇಶದ ಆಸ್ತಿ. ಮುಂದಿನ ದಿನಗಳಲ್ಲಿ ಮತ್ತೆ ಬಂದು ನಿಮ್ಮ ಸಲಹೆ ಕೇಳುತ್ತೇನೆ. ಅಧಿವೇಶನದಲ್ಲಿ ನಿಮ್ಮ ಪ್ರತಿನಿಧಿಗಳ ಸಲಹೆ ಆಲಿಸುತ್ತೇನೆ. ಈ ಸರ್ಕಾರ ನಿಮ್ಮ ಜೊತೆ ಇದೆ ಎಂದರು. ಈ ಭಾಗದ ಎಲ್ಲಾ ಪಕ್ಷಗಳ ಶಾಸಕರು ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಮಾಡಿದ್ದೇವೆ. ಈ ಸಂಪುಟ ಸಭೆಯಲ್ಲಿ 60 ತೀರ್ಮಾನ ಮಾಡಿದ್ದು, ಅದರಲ್ಲಿ 40 ಕರಾವಳಿ ಜಿಲ್ಲೆಗಳಿಗೆ ಸಂಬAಧಿಸಿದೆ” ಎಂದರು. ನಿಮ್ಮ ಮಾತೃಭಾಷೆ ತುಳುವನ್ನು ಎರಡು ಜಿಲ್ಲೆಗಳಲ್ಲಿ ಎರಡನೇ ಅಧಿಕೃತ ಭಾಷೆ ಎಂದು ತೀರ್ಮಾನ ಮಾಡಿದ್ದೇವೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ, ಅಭಿವೃದ್ಧಿಗೆ ನೀತಿ ರೂಪಿಸಿ ಅನೇಕ ಯೋಜನೆಗೆ ಅನುಮೋದನೆ ನೀಡಿದ್ದೇವೆ. ಇದರಿಂದ ಹೂಡಿಕೆ ಆಕರ್ಷಸಿ, ಇಲ್ಲಿನ ಜನ ವಲಸೆ ಹೋಗುವುದನ್ನು ತಪ್ಪಿಸಬೇಕು.
ಇದು ಐತಿಹಾಸಿಕ ಧಾರ್ಮಿಕ ಪುಣ್ಯಭೂಮಿ. ಈ ಭಾಗದ ಜನ ವಿದ್ಯಾವಂತರು, ಪ್ರಜ್ಞಾವಂತರು. ನಾವು ಈ ಭಾಗಕ್ಕೆ ತೀರ್ಥಯಾತ್ರೆಗೆ ಬರುತ್ತೇವೆ. ಈ ಭಾಗದಲ್ಲಿ ಆರಂಭವಾದ ಐದಾರು ಬ್ಯಾಂಕ್ ಗಳು ದೇಶಕ್ಕೆ ಮಾದರಿಯಾಗಿ ಬೆಳೆದವು. ಇಡೀ ದೇಶದಲ್ಲಿ ಅತಿ ಹೆಚ್ಚು ವೈದ್ಯರು ತಯಾರಾಗುವುದು, ಈ ತುಳುನಾಡಿನಲ್ಲಿ. ಸುಮಾರು 4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹಾಡಿ ಹೊಗಳಿದರು.
ಕೇರಳ ಮಾದರಿಯಲ್ಲಿ ತಜ್ಞರ ಸಮಿತಿ, ಭೌತಿಕ ಸಮೀಕ್ಷೆಗೆ ಒತ್ತಾಯ
ಸಂವಾದ ಸಭೆಯಲ್ಲಿ ಈ ಭಾಗದ ವಿವಿಧ ಸಂಘನೆಗಳ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳು ಮಾತನಾಡಿದರು. ಹಿರಿಯ ವಕೀಲರಾದ ಟಿ ಬಿ ಶೆಟ್ಟಿ, ಮಲೆಕುಡಿಯ ಸಮುದಾಯದ ರಾಜ್ಯಾಧ್ಯಕ್ಷರಾದ ಶ್ರೀಧರ್ ಗೌಡ, ಉಡುಪಿ ರೈತ ಸಂಘದ ಉದಯ ಕುಮಾರ್ ವಂಡ್ಸೆ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ನವೀನ್ ಅಡ್ಯಂತಾಯ, ನಾಡ್ಪಾಲು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ದಿನೇಶ್ ಹೆಗಡೆ, ಕೈಗಾರಿಕೋದ್ಯಮಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಸಂಸದರಾದ ಕೋm ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್ ಅವರು ಮಾತನಾಡಿದರು.





.
.
.
.
.
.
.
.
.
.
.
.
.
.
.
.
.
.
.
.
