

ಹೆಬ್ರಿ, ಸೆ.20: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಕನ್ನಡ ಬೋಧನಾ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಹೆಬ್ರಿಯ ಅಮೃತ ಭಾರತಿ ವಿದ್ಯಾಲಯದ ಕನ್ನಡ ಶಿಕ್ಷಕ ಚಾರದ ಮಹೇಶ ಹೈಕಾಡಿಯವರಿಗೆ ಈ ಬಾರಿಯ “ಡಾ. ಶಿವರಾಮ ಕಾರಂತ ಉತ್ತಮ ಶಿಕ್ಷಕ ಪ್ರಶಸ್ತಿ” ಲಭಿಸಿದೆ.ಅವರ ಶಿಕ್ಷಣ ಸೇವೆ, ಕನ್ನಡ ಭಾಷಾ ಬೋಧನೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ ಡಾ. ಶಿವರಾಮ ಕಾರಂತ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಹೇಶ ಹೈಕಾಡಿಯವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕನ್ನಡ ಭಾಷಾ ಕಲಿಕೆ, ಸಾಹಿತ್ಯಾಸಕ್ತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಕನ್ನಡ ವಿಷಯದ ಬೋಧನೆಯಲ್ಲಿ ಹೊಸತನದ ಪ್ರಯೋಗಗಳನ್ನು ಅಳವಡಿಸಿಕೊಂಡು, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ವಿವಿಧ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳ ಸಂಘಟನೆ ಮತ್ತು ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ವಿದ್ಯಾರ್ಥಿ/ಶಿಕ್ಷಕ ಹಾಗೂ ಪೋಷಕರ ನಡುವಿನ ಶೈಕ್ಷಣಿಕ ಸಂಬAಧವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಶಸ್ತಿಗೆ ಭಾಜನರಾದ ಮಹೇಶ ಹೈಕಾಡಿ ಅವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿತೈಷಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸೆಪ್ಟೆಂಬರ್ 26 ಶನಿವಾರ ಕಾರಂತ ಥೀಮ್ ಪಾರ್ಕ್ ಕೂಟದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ವೀಕರಿಸಲಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
