

ಉಡುಪಿ,ಸೆ.20: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆರ ಬಿದ್ದು ದುರಂತ ಸಂಭವಿಸಿದೆ. ಅಪಘಾತ ನಡೆದ ತಕ್ಷಣವೇ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ, ತಕ್ಷಣ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿ ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ನೀರಿನಿಂದ ಮೇಲೆ ತರುವಲ್ಲಿ ಯಶಸ್ವಿಯಾದರು. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರ ಜೀವ ಉಳಿಸಿದ ಗಣೇಶ್ ಅವರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
