

ಕಾರ್ಕಳ, ಸೆ.20: ಮಾಜಿ ಸಚಿವ ಬಿ. ರಮಾನಾಥ ರೈಯವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಎಕ್ಸ್ಪ್ರೆಸ್ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಕಾರ್ಕಳ ರಾಷ್ಠ್ರೀಯ ಹೆದ್ದಾರಿ169ರ ಸಾಣೂರು ರಾಮ ಮಂದಿರ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು,ಕಾರು ಚಾಲಕ ವಿರುದ್ಧ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಮೂಡಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗವಾಗಿ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ನೇರವಾಗಿ ರಮಾನಾಥ ರೈಯವರ ಕಾರಿಗೆ ಅಪ್ಪಳಿಸಿದೆ.ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್ಸಿಗೂ ಹಾನಿಯಾಗಿದೆ.
ಇದೇ ದಾರಿಯಲ್ಲಿ ಸಂಚರಿಸುತ್ತಿದ್ದ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಜಗದೀಶ್ ,ಶಿಶಿರ್ ಹಾಗೂ ಸ್ಥಳೀಯರು ತುರ್ತುಕಾರ್ಯಾಚರಣೆಗೆ ಸಹಕಾರ ನೀಡಿದರು.ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಹಾಗೂ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತು.





.
.
.
.
.
.
.
.
.
.
.
.
.
.
.
.
.
.
.
.
