

ಕಾರ್ಕಳ, ಸೆ.21: ರೈತರ ಹಿತವನ್ನು ಮರೆತ ಸೊಕ್ಕಿನ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ತಿರುಗಿಬಿದ್ದಿದ್ದು ಸರ್ಕಾರದ ವೈಫಲ್ಯತೆಗೆ ಹಿಡಿದ ಕೈನ್ನಡಿಯಾಗಿದೆ. ಒಬ್ಬ ಹಿರಿಯ ಶಾಸಕ ಹಾಗೂ ಮಾಜಿ ಸಚಿವರೊಬ್ಬರು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡದೇ ಇದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಗಡುವು ನೀಡುತ್ತಿರುವುದು ಈ ಸರ್ಕಾರದ ರೈತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ X ನಲ್ಲಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಉತ್ತರ ಕರ್ನಾಟಕದಲ್ಲಿ ತೀವ್ರ ಅಭಾವವಿದ್ದರೂ, ಅಧಿಕಾರ ಹಾಗೂ ಕಮಿಷನ್ ದಂಧೆಯಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಕಣ್ಣೀರು ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಕೆ. ಪಾಟೀಲರು ಸಿಎಂ ಆದೇಶವನ್ನು ಅಧಿಕಾರಿಗಳು ಧಿಕ್ಕರಿಸುತ್ತಿದ್ದಾರೆ ಆ ಮೂಲಕ ಸರ್ಕಾರಕ್ಕೆ ಮಸಿ ಬಳಿಯುತ್ತಿದ್ದಾರೆ ಎಂದು ಬಹಿರಂಗವಾಗಿ ಪತ್ರ ಬರೆದಿದ್ದಾರೆ.ಮುಖ್ಯಮಂತ್ರಿಗಳ ಮಾತಿಗೂ ಬೆಲೆಯಿಲ್ಲ, ಸಚಿವರ ಆದೇಶಕ್ಕೂ ಬೆಲೆಯಿಲ್ಲ. ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಕಡೆಗಣಿಸಿರುವುದು ಈ ಸರ್ಕಾರದ ರೈತ ವಿರೋಧಿ ನೀತಿಗೆ ಕೈಗನ್ನಡಿಯಾಗಿದೆ. ಅಧಿಕಾರಿಗಳ ಅಸಮರ್ಥತೆ, ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕದ ರೈತರು ಬೀದಿಗೆ ಬಿದ್ದಿದ್ದಾರೆ. ತಕ್ಷಣವೇ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಇಲ್ಲವೇ ಖುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
