Share this news

ನವದೆಹಲಿ,ಸೆ.23: ‘ವಂದೇ ಮಾತರಂ’ ಗಿತೆಗೆ ಸಂಬಂಧಿಸಿದಂತೆ 1971ರ ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಗೆ ತಂದಿರುವ 2026ರ ತಿದ್ದುಪಡಿ ಹಾಗೂ ಗೀತೆಯ ಎಲ್ಲಾ 6 ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ಗೃಹ ಸಚಿವಾಲಯ ಹೊರಡಿಸಿರುವ ಆದೇಶದ ಸಂವಿಧಾನಾತ್ಮಕ ಸಿಂಧುತ್ವವನ್ನು ಪ್ರಶ್ನಿಸಿ ಪ್ರಸಿದ್ಧ ಕರ್ನಾಟಕಿ ಸಂಗೀತಗಾರ ಟಿ.ಎಂ. ಕೃಷ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ.

ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಅರ್ಜಿ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಪೀಠವು, “ಯಾವುದು ರಾಷ್ಟ್ರಗೀತೆ ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಅದು ಸರ್ಕಾರದ ತೀರ್ಮಾನಕ್ಕೆ ಬಿಟ್ಟದ್ದು. ಆದರೆ, ಧಾರ್ಮಿಕ ಅಥವಾ ಮನಸ್ಸಾಕ್ಷಿಯ ಕಾರಣಕ್ಕೆ ಗೀತೆಯನ್ನು ಹಾಡಲು ನಿರಾಕರಿಸುವ ವ್ಯಕ್ತಿಗೆ ‘ಬಿಜೋಯ್ ಎಮ್ಯಾನುಯೆಲ್’ ಪ್ರಕರಣದ ಪ್ರಸಿದ್ಧ ತೀರ್ಪಿನ ಅಡಿಯಲ್ಲಿ ಲಭ್ಯವಿರುವ ಹಕ್ಕುಗಳನ್ನು ರಕ್ಷಿಸಲಾಗುವುದೇ ಎಂಬುದನ್ನು ನ್ಯಾಯಾಲಯ ಪರಿಶೀಲಿಸಲಿದೆ ಎಂದು ತಿಳಿಸಿತು. ಅಲ್ಲದೇ, ಧಾರ್ಮಿಕ ನಂಬಿಕೆಗಳ ಕಾರಣದಿಂದ ಹಾಡದಿರುವ ವ್ಯಕ್ತಿಯನ್ನು ಕ್ರಿಮಿನಲ್ ಶಿಕ್ಷೆಗೆ ಗುರಿಪಡಿಸುವುದಿಲ್ಲ ಎಂಬ ಆಶಯವನ್ನು ವ್ಯಕ್ತಪಡಿಸಿತು.

ಅರ್ಜಿದಾರರ ವಾದವೇನು?

ಟಿ.ಎಂ. ಕೃಷ್ಣ ಅವರ ಪರವಾಗಿ ಹಿರಿಯ ವಕೀಲ ಡಾ. ಎಸ್. ಮುರಳೀಧರ್ ವಾದ ಮಂಡಿಸಿದರು. ‘ವಂದೇ ಮಾತರಂ’ ಗೀತೆಯ ಕೊನೆಯ ನಾಲ್ಕು ಚರಣಗಳಲ್ಲಿ ದುರ್ಗಾ, ಲಕ್ಷ್ಮಿ ಮತ್ತು ಸರಸ್ವತಿ ದೇವಿಗಳ ಉಲ್ಲೇಖವಿದ್ದು, ಇದನ್ನು ಕಡ್ಡಾಯವಾಗಿ ಹಾಡುವಂತೆ ಒತ್ತಾಯಿಸುವುದು ಸಂವಿಧಾನದ ಜಾತ್ಯತೀತ ತತ್ವಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲೇಖಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕಾಯ್ದೆಯ ತಿದ್ದುಪಡಿಯಲ್ಲಿ ‘ರಾಷ್ಟ್ರಗೀತೆ’ ಎಂದರೆ ಏನು ಎಂಬುದನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿಲ್ಲ ಹಾಗೂ ಸಾರ್ವಜನಿಕ ಚರ್ಚೆಯಿಲ್ಲದೇ ಆತುರವಾಗಿ ಈ ತಿದ್ದುಪಡಿ ತರಲಾಗಿದೆ ಎಂದು ಮುರಳೀಧರ್ ಕೋರ್ಟ್ ಗಮನಕ್ಕೆ ತಂದರು.

1937ರಲ್ಲೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮುಸ್ಲಿಂ ಸದಸ್ಯರ ಆಕ್ಷೇಪದ ನಂತರ ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಸಾರ್ವಜನಿಕವಾಗಿ ಹಾಡಲು ಸಮ್ಮತಿಸಿತ್ತು ಎಂಬ ಐತಿಹಾಸಿಕ ಹಿನ್ನೆಲೆಯನ್ನು ನ್ಯಾಯಾಲಯಕ್ಕೆ ವಿವರಿಸಲಾಯಿತು.

ವಿಚಾರಣೆ ವೇಳೆ ಪೀಠವು, ಯುಎಸ್ಎ ಕೂಡ ಧಾರ್ಮಿಕ ಉಲ್ಲೇಖಗಳನ್ನು ಬಳಸುತ್ತದೆ ಎಂದು ಹೇಳಿದಾಗ, ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರವೇಶಿಸಿ, “ಜಾತ್ಯತೀತತೆ ಎಂಬುದು ಇಷ್ಟು ಕಿರಿದಾಗಿರಬಾರದು” ಎಂದರು. ಮುರಳೀಧರ್ ಅವರು ಸರ್ಕಾರದ ಆದೇಶಗಳ ಬಗ್ಗೆ ಮಾತನಾಡಿದಾಗ, ಸಾಲಿಸಿಟರ್ ಜನರಲ್ ಮೆಹ್ತಾ ಅವರು, “ಕಾನೂನು ರಚನೆಯು ‘ನಕ್ಸಲೈಟ್‌ಗಳ ಕಲ್ಪನೆ’ಗೆ ತಕ್ಕಂತೆ ನಡೆಯಲು ಸಾಧ್ಯವಿಲ್ಲ” ಎಂದು ಕಟುವಾಗಿ ವ್ಯಾಖ್ಯಾನಿಸಿದರು. ಸಾಲಿಸಿಟರ್ ಜನರಲ್ ಅವರ ಈ ‘ನಕ್ಸಲೈಟ್’ ಎಂಬ ಪದಬಳಕೆಗೆ ವಕೀಲ ಮುರಳೀಧರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಹೇಳಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಆದರೆ, ಸಾಲಿಸಿಟರ್ ಜನರಲ್ ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ಕ್ಷಮೆ ಕೋರಲು ನಿರಾಕರಿಸಿದರು.

2026ರ ತಿದ್ದುಪಡಿ ಕಾಯ್ದೆಯನ್ವಯ ರಾಷ್ಟ್ರಗೀತೆ ಅಥವಾ ರಾಷ್ಟ್ರಗಾನವನ್ನು ಉದ್ದೇಶಪೂರ್ವಕವಾಗಿ ತಡೆಯುವುದು ಅಥವಾ ಅಡ್ಡಿಪಡಿಸುವುದನ್ನು ಅಪರಾಧವೆಂದು ಪರಿಗಣಿಸಲಾಗಿದ್ದು, ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶವಿದೆ. ಅರ್ಜಿದಾರರು ಈ ಶಿಕ್ಷೆಯ ಭಯದಿಂದ ಕಲಾತ್ಮಕ ಅಭಿವ್ಯಕ್ತಿ ಹಾಗೂ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರೀಂ ಕೋರ್ಟ್ ಈ‌ ಕುರಿತು ಕೇಂದ್ರ ಸರ್ಕಾರಕ್ಕೆ ಅಧಿಕೃತ ನೊಟೀಸ್ ಜಾರಿಗೊಳಿಸದೇ ಕೇಂದ್ರದ ಲಿಖಿತ ಉತ್ತರಕ್ಕೆ ಕಾಯುವುದಾಗಿ ತಿಳಿಸಿ, ಈ‌ ಪ್ರಕರಣದ ಮುಂದಿನ ವಿಚಾರಣೆಗೆ ಕಾಯ್ದಿರಿಸಿದೆ.

 

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *