

ಕಾರ್ಕಳ,ಸೆ.24: ಎರ್ಲಪಾಡಿ ಗ್ರಾಮದ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಕುಟುಂಬದ ಸದಸ್ಯರಾದ ಸಂತೋಷ್ ಶಾಸ್ತ್ರಿ, ಕವಿತಾ ಶಾಸ್ತ್ರಿ ಇತರರ ಜೊತೆ ದೇವಸ್ಥಾನಕ್ಕೆ ಆಗಮಿಸಿದ ರವಿಶಾಸ್ತ್ರಿ, ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ಕಲ್ಪೋಕ್ತ ಪೂಜೆ ಹಾಗೂ ನಾಗತಂಬಿಲ ಸೇವೆ ನೆರವೇರಿಸಿದರು. ಬಳಿಕ ಶ್ರೀ ವಿಷ್ಣುಮೂರ್ತಿ ದೇವರಿಗೆ ಮಹಾಪೂಜೆ ಸಲ್ಲಿಸಿದರು.
ನರಸಿಂಹ ತಂತ್ರಿ ಹಾಗೂ ಅಶೋಕ್ ಕಾರಂತ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಸ್ಥಾನದ ಮೊಕ್ತೇಸರ ಅನಂತ ಪಟ್ಟಾಭಿರಾವ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಭೋಜ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
