

ಉಡುಪಿ,ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೆ. 24 ಗುರುವಾರದಂದು ನಡೆಯಿತು.
ಮಣಿಪಾಲ ಪೋಲಿಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಹೇಶ್ ಪ್ರಸಾದ್ ಕಾರ್ಯಕ್ರಮದ ಉದ್ಘಾಟಸಿ ಮಾತನಾಡಿ, ಕ್ರೀಡೆ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಹಾಗೂ ಇವು ಕ್ರೀಡಾಪಟುಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ. ಕ್ರೀಡೆಯ ಧ್ಯೇಯ ಮತ್ತು ಛಲದ ಗುಣಗಳು ಒಳ್ಳೆಯ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಮುಂದಿರುವ ಕ್ರೀಡಾಪಟುಗಳು ಉತ್ತಮ ದೇಶವನ್ನು ನಿರ್ಮಾಣ ಮಾಡುವ ಮತ್ತು ಸಮಾಜದ ಉತ್ತಮ ನಾಗರೀಕರಾಗುವ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಭಾರ ಉಪ ನಿರ್ದೇಶಕ ರವೀಂದ್ರ ಉಪಾಧ್ಯ ಮಾತನಾಡಿ, ಉಡುಪಿ ಜಿಲ್ಲೆಯು ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಹಾಗೂ ಕ್ರೀಡಾಪಟುಗಳಿಗೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಸ್ಫೂರ್ತಿ ತುಂಬಾ ಅಗತ್ಯವಾಗಿದ್ದು, ಅದನ್ನು ಎಲ್ಲಾ ಕ್ರೀಡಾಪಟುಗಳು ಮೈಗೂಡಿಸಿಕೊಳ್ಳಿ ಎಂಬ ಆಶಯದ ನುಡಿಗಳನ್ನಾಡಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ, ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಕ್ರೀಡಾ ಸಂಯೋಜಕ ಮಂಜುನಾಥ ಜೋಗಿ, ಪರಿವೀಕ್ಷಕರಾದ ಶರತ್ ಮತ್ತು ಅಜೆಕಾರ್ ಪದ್ಮ ಗೋಪಾಲ್ ಎಜ್ಯಕೇಶನ್ ಟ್ರಸ್ಟ್ ನ ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ಸ್ವಾಗತಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮಾರೋಪ ಸಮಾರಂಭ:
ಸಮಾರೋಪ ಸಮಾರಂಭದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಮ್ ಕೊಡವೂರು ವಿಜೇತರಿಗೆ ಬಹುಮಾನವನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ,ಉಪ ಪ್ರಾಂಶುಪಾಲರಾದ ರವಿ ಜಿ, ನವೀನ್ ಎ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆಯ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ ಮತ್ತು ಪರಿವೀಕ್ಷಕ ಶರತ್ ಉಪಸ್ಥಿತರಿದ್ದರು. ಬಾಲಕರ ವಿಭಾಗದಲ್ಲಿ ಉಡುಪಿ ತಾಲೂಕು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿತು. ಕಾಪು ತಾಲೂಕು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಕಾರ್ಕಳ ತಾಲೂಕು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿತು ಮತ್ತು ಕಾಪು ತಾಲೂಕು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು





.
.
.
.
.
.
.
.
.
.
.
.
.
.
.
.
.
.
.
.
