

ಬೆಂಗಳೂರು,ಸೆ.25: ದೇಶದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ಖಡಕ್ ಅಧಿಕಾರಿ ಎನ್ ಶಶಿಕುಮಾರ್ ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಿದೆ.
ಈ ಹಿಂದಿನ SIT ತನಿಖಾ ತಂಡದಲ್ಲಿದ್ದ ಯಾವುದೇ ಅಧಿಕಾರಿಯನ್ನು ಹೊಸ ತಂಡದಲ್ಲಿ ಸೇರಿಸಬಾರದು ಎಂಬ ಸುಪ್ರೀಂ ಕೋರ್ಟ್ನ ಕಟ್ಟುನಿಟ್ಟಿನ ನಿರ್ದೇಶನದ ಹಿನ್ನಲೆಯಲ್ಲಿ ಈ ಹಿಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರ ಸಾರಥ್ಯದಲ್ಲಿ ವಿಶೇಷ ತನಿಖಾ ತಂಡವನ್ನು ಕಣಕ್ಕಿಳಿಸಿದೆ.
ಎನ್. ಶಶಿಕುಮಾರ್ ನೇತೃತ್ವದ ಈ ವಿಶೇಷ ತನಿಖಾ ದಳದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರು ರಾಜ್ಯ ಗುಪ್ತವಾರ್ತೆ ವಿಭಾಗದ ಪೊಲೀಸ್ ಅಧೀಕ್ಷಕಿ ನಿಶಾ,ಪಿ. ಜೇಮ್ಸ್, ಬೆಂಗಳೂರು ಸಿಐಡಿ ವಿಭಾಗದ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸಾರ್,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಸೇರಿದಂತೆ ದಕ್ಷ ಅಧಿಕಾರಿಗಳು ತನಿಖೆಯ ಹೊಣೆ ವಹಿಸಲಿದ್ದಾರೆ.
ಕಳೆದ 13 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಕಾರ್ಕಳದ ಸಂತೋಷ್ ರಾವ್ ಅವರನ್ನು ಆರೋಪಿ ಎಂದು ಬಂಧಿಸಿದ್ದ ಪೊಲೀಸರು ಬಳಿಕ ಸುಧೀರ್ಘ ವಿಚಾರಣೆ ನಡೆಸಿ ಅಂತಿಮವಾಗಿ ಹೈಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಅಂತಿಮವಾಗಿ ಸಂತೋಷ್ ರಾವ್ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು. ತದನಂತರ ಕಳೆದ 2025 ರಲ್ಲಿ ಮತ್ತೆ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಚಿನ್ನಯ್ಯ ಹೇಳಿಕೆಯ ಆಧಾರದಲ್ಲಿ SIT ರಚಿಸಿ ಧರ್ಮಸ್ಥಳದ ಹತ್ತಾರು ಕಡೆ ಉತ್ಖನನ ನಡೆಸಿ ಮಾನವ ಶವದ ಅಸ್ಥಿಪಂಜರಕ್ಕಾಗಿ ಶೋಧ ನಡೆಸಿತ್ತು. ಆದರೆ ಯಾವುದೇ ಸಾಕ್ಷö್ಯಗಳು ಸಿಗದೇ ಈ ತನಿಖೆಯೇ ಅಪೂರ್ಣಗೊಂಡಿತ್ತು.
ಇದೀಗ ಮರುತನಿಖೆಗೆ ಒತ್ತಾಯಿಸಿ ಸೌಜನ್ಯ ತಾಯಿ ಕುಸುಮಾವತಿಯವರು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಸುಪ್ರೀಂ ಮರು ತನಿಖೆಗೆ ಆದೇಶಿಸಿತ್ತು. ಇದೀಗ ಅಂತಿಮವಾಗಿ SIT ರಚಿಸಿದ ಸರ್ಕಾರ ಈ ಪ್ರಕರಣದ ನಿಷ್ಪಕ್ಷಪಾತ ಹಾಗೂ ಸಮಗ್ರ ಮರುತನಿಖೆ ನಡೆಸಿ ಶೀಘ್ರ ವರದಿ ಸಲ್ಲಿಸುವಂತೆ ಎಸ್ಐಟಿ ತಂಡಕ್ಕೆ ಸೂಚಿಸಿದೆ. ಇದರಿಂದ ಸುಧೀರ್ಘ ಕಾಲದಿಂದ ನಿಗೂಢವಾಗಿಯೇ ಉಳಿದ ಪ್ರಕರಣವನ್ನು ತಂಡ ಬೇಧಿಸಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದ.





.
.
.
.
.
.
.
.
.
.
.
.
.
.
.
.
.
.
.
.
