

ಕಾರ್ಕಳ,ಸೆ.26: ಸರಕಾರಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ಸ್ತ್ರೀ ರೋಗ ತಜ್ಞರಿಗೆ ಕರ್ತವ್ಯಕ್ಕೆ ಅಡ್ಡಪಡಿಸಿದಲ್ಲದೇ OPD ಗೆ ಸಾರ್ವಜನಿಕರು ಬರುವುದು ನಿಷೇಧವಿದ್ದರೂ ಅಕ್ರಮ ಪ್ರವೇಶ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ನಡೆದಿದ್ದು ಈ ಪ್ರಕರಣದ ಆರೋಪಿಯನ್ನು ಬಂಧಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಒತ್ತಾಯಿಸಿದ್ದಾರೆ.
ಈ ಘಟನೆ ಕುರಿತು ವೈದ್ಯರು ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದರೂ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಆಗದೇ ಇರೋದು ಸಾರ್ವಜನಿಕ ವಲಯದಲ್ಲಿ ಅನುಮಾನ ಮೂಡಿದೆ. ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದು ಕೊಳ್ಳುವಂತೆ ಮಾಡಿದೆ ಹೀಗಿರುವಾಗ ದೂರನ್ನು ಪುನರ್ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಿ ಪೊಲೀಸ್ ಇಲಾಖೆಯ ಮೇಲಿರುವ ನಂಬಿಕೆಯನ್ನು ಉಳಿಸಬೇಕು ಹಾಗೂ
ಮುಂದಿನ ದಿನಗಳ ಒಳಗಾಗಿ ಕ್ರಮ ಜರುಗಿಸದೇ ಇದ್ದಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ರಮಿತಾ ಸೂರ್ಯವಂಶಿ ತಿಳಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
