

ಕಾರ್ಕಳ,ಸೆ27: ಸರ್ಕಾರಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ಮಹಿಳಾ ವೈದ್ಯೆಗೆ ಮಾನಸಿಕ ಕಿರುಕುಳ ನೀಡಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕಾರ್ಕಳದ ದಲಿತ ಸಮುದಾಯದ ಮುಖಂಡನ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಸುಧಾಕರ್ ಆಗ್ರಹಿಸಿದ್ದಾರೆ.
ದಲಿತ ಮುಖಂಡ ಆಸ್ಪತ್ರೆಯಲ್ಲಿ ತೋರಿದ ದುರ್ವರ್ತನೆಯಿಂದ ಇಡೀ ದಲಿತ ಸಮುದಾಯಕ್ಕೆ ಕಪ್ಪು ಚುಕ್ಕೆಯಂತಾಗಿದೆ. ಈ ಘಟನೆಯನ್ನು ಕರ್ನಾಟಕ ಭೀಮ್ ಸೇನೆ ಜಿಲ್ಲಾ ಘಟಕ ಉಗ್ರವಾಗಿ ಖಂಡಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಆದ್ದರಿಂದ ತಪ್ಪು ಮಾಡಿದ ದಲಿತ ಮುಖಂಡನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷರಾದ ಸುಧಾಕರ್ ದಾನಶಾಲೆ ಒತ್ತಾಯಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
