

ರಾಮನಗರ,ಸೆ.27: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ‘ಗ್ಯಾರಂಟಿ ಯೋಜನೆ’ಗಳ ಕುರಿತು ಸರ್ಕಾರದ ಒಳಗಡೆಯೇ ಅಸಮಾಧಾನ ಕೇಳಿಬಂದಿದೆ. ರಾಜ್ಯದಲ್ಲಿ ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆ ಇಲ್ಲದಿದ್ದರೆ ಸರ್ಕಾರಕ್ಕೆ ಇಷ್ಟೊಂದು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಸಚಿವ ಹೆಚ್. ಸಿ. ಬಾಲಕೃಷ್ಣ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ವಿಶೇಷ ಚೇತನರ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಸರ್ಕಾರದ ಸೀಮಿತ ಅನುದಾನ ಬಳಸಿಕೊಂಡು ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ. ಒಂದೆಡೆ ರೈತರು ಪರಿಹಾರಕ್ಕಾಗಿ ಆಗ್ರಹಿಸಿ ಗಲಾಟೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದರೆ ಜನಸಾಮಾನ್ಯರು ಪ್ರತಿಭಟಿಸುತ್ತಾರೆ. ಈ ಎರಡೂ ಸಮಸ್ಯೆಗಳ ನಡುವೆ ಸಿಲುಕಿ ಸರ್ಕಾರ ಒದ್ದಾಡುವಂತಾಗಿದೆ ಎಂದು ಬಾಲಕೃಷ್ಣ ಹೇಳಿದ್ದಾರೆ.
ಸರ್ಕಾರ ನಡೆಸುವಾಗ ಹಣಕಾಸಿನ ವ್ಯವಸ್ಥೆಯನ್ನು ಸರಿದೂಗಿಸುವುದು ಅತ್ಯಗತ್ಯವಾಗಿದ್ದು, ಪ್ರತಿಯೊಂದನ್ನೂ ಬಜೆಟ್ ಮಿತಿಯೊಳಗೇ ನಿರ್ವಹಿಸಬೇಕಾಗುತ್ತದೆ. ವಿಶೇಷ ಚೇತನರ ವಿವಿಧ ಬೇಡಿಕೆಗಳಿಗೆ ಸಂಬAಧಿಸಿದAತೆ ಮುಂಬರುವ ಸಂಪುಟ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.





.
.
.
.
.
.
.
.
.
.
.
.
.
.
.
.
.
.
.
.
