

ಕಾರ್ಕಳ, ಸೆ. 27: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅಜೆಕಾರು ಪದವಿ ಪೂರ್ವ ಕಾಲೇಜು, ಪದ್ಮ ನಗರ ಇಲ್ಲಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಸಾಲು ಸಾಲು ಪದಕಗಳನ್ನು ಮುಡಿಗೇರಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಪ್ರಥಮ ಪಿಯುಸಿ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿ ದೀಪ್ತಿ ಅವರು 800 ಮೀಟರ್ ಫ್ರೀ ಸ್ಟೈಲ್ನಲ್ಲಿ ಚಿನ್ನದ ಪದಕ, 200 ಮೀಟರ್ ಫ್ರೀ ಸ್ಟೈಲ್ನಲ್ಲಿ ಬೆಳ್ಳಿಯ ಪದಕ ಹಾಗೂ 50 ಮೀಟರ್ ಬಟರ್ ಫ್ಲೈ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಅದೇ ವಿಭಾಗದ ಮತ್ತೊಬ್ಬ ವಿದ್ಯಾರ್ಥಿನಿ ಕುಮಾರಿ ಧನ್ಯ ಕೋರಿ ಅವರು 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿಯ ಪದಕ, 100 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ಕಂಚಿನ ಪದಕ ಹಾಗೂ 50 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ಕಂಚಿನ ಪದಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇವರೊಂದಿಗೆ ಪ್ರಥಮ ಪಿಯುಸಿ ಪಿಸಿಎಂಸಿ ವಿಭಾಗದ ವಿದ್ಯಾರ್ಥಿ ಅಭಿನವ್ ಸ್ಕಂದ ಮುದ್ದು ಅವರು 50 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ಬೆಳ್ಳಿಯ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಕಾಲೇಜಿನ ಹೆಸರನ್ನು ಜಿಲ್ಲೆಯಾದ್ಯಂತ ಪ್ರಖ್ಯಾತಿಗೊಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟಿನ ಅಧ್ಯಕ್ಷರಾದ ಡಾಕ್ಟರ್ ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
