

ಕಾರ್ಕಳ,ಸೆ.28 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜು,
ಕೊಲ್ಲೂರು ಇಲ್ಲಿನ ಸಹಯೋಗದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಕಾಲೇಜಿನ 5 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ವಿದ್ಯಾರ್ಥಿಗಳಾದ ಸ್ವಸ್ತಿಕಾ ಎಲ್ ಡಿ, ಮಿಷ್ಕಾ ಬಿ ಶೆಟ್ಟಿ, ಲಿಖಿತಾ ರಾಥೋಡ್, ಆಯುಶ್ ಎಚ್ ವಿ ಹಾಗೂ ಪೂರ್ವಿಕ್ ಎಸ್ ಬಾಬು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಗ್ರೀಷ್ಮಾ ಸತೀಶ್ ಬೆಸ್ಟ್ ಅಫೆನ್ಸ್ ಅವಾರ್ಡ್ ತನ್ನದಾಗಿಸಿಕೊಂಡಿದ್ದಾರೆ.
ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
