

ಕಾರ್ಕಳ,ಸೆ.30: ಸಹಕಾರಿ ಸಂಘಗಳ ಲೆಕ್ಕಪರಿಶೋಧನಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಉದ್ದೇಶದಿಂದ ಪದವೀಧರರಿಗೆ ೬ ತಿಂಗಳ ತರಬೇತಿ ನೀಡಿ, ಪರವಾನಗಿ ಆಧಾರಿತ ಲೆಕ್ಕಪರಿಶೋಧನೆಗೆ ಅವಕಾಶ ಕಲ್ಪಿಸುವ ಪ್ರಸ್ತಾವನೆಯಿಂದ ಸಹಕಾರಿ ಕ್ಷೇತ್ರದಲ್ಲಿ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಯುವಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಇದರಿಂದ ಸಂಘಗಳ ಆರ್ಥಿಕ ವ್ಯವಹಾರಗಳ ಮಾಹಿತಿಯನ್ನು ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ರೂಪದಲ್ಲಿ ಲಭ್ಯವಾಗಿಸುವುದು ಸದಸ್ಯರ ವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಬಹುದು.
ಈ ಕ್ರಮ ಸಹಕಾರಿ ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಆದ್ದರಿಂದ ಆದರೆ ಲೆಕ್ಕಪರಿಶೋಧಕರ ಸ್ವತಂತ್ರತೆ, ತರಬೇತಿಯ ಗುಣಮಟ್ಟ, ಸದಸ್ಯರ ಆರ್ಥಿಕ ಮಾಹಿತಿಯ ಗೌಪ್ಯತೆ ಹಾಗೂ ಸಣ್ಣ ಸಹಕಾರಿ ಸಂಘಗಳ ಮೇಲಿನ ಆರ್ಥಿಕ ಹೊರೆಗಳನ್ನು ಗಮನದಲ್ಲಿಟ್ಟುಕೊಂಡು ಸುಧಾರಣೆಗಳನ್ನು ಜಾರಿಗೊಳಿಸಬೇಕು. ಹೊಸ ವ್ಯವಸ್ಥೆಯನ್ನು ಹಂತ ಹಂತವಾಗಿ ಜಾರಿಗೊಳಿಸಿ, ಸಹಕಾರಿ ಸಂಘಗಳ ಹಿತಾಸಕ್ತಿ ಮತ್ತು ಸದಸ್ಯರ ವಿಶ್ವಾಸವನ್ನು ಕಾಪಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಹಕಾರ ಭಾರತಿ ರಾಜ್ಯಾಧ್ಯಕ್ಷರಾದ ಪ್ರಭುದೇವ ಆರ್ ಮಾಗನೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಆಗ್ರಹಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
