Share this news

ಕುಂದಾಪುರ,ಸೆ.30:ಅನೈತಿಕ ಸಂಬಂಧದ ವ್ಯಾಮೋಹಕ್ಕೆ ಸಿಲುಕಿ ಪತಿ ಮಹಾಶಯನೊಬ್ಬ ತನ್ನ ಪತ್ನಿಗೆ ವಿಷಕಾರಿ ಇಂಜೆಕ್ಷನ್ ಕೊಟ್ಟು ಹತ್ಯೆಗೆ ಯತ್ನಿಸಿದ ಬಳಿಕ ತನ್ನ ಪ್ರೇಯಸಿಯ ಜೊತೆಗೆ ಪರಾರಿಯಾಗಿ ದಟ್ಟಾರಣ್ಯದಲ್ಲಿ ಪ್ರೇಯಸಿಯ ಜೊತೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಾಲ್ಕಲ್ ಸಮೀಪದ ಚಾರ್ಸಾಲ್‌ನಲ್ಲಿ ನಡೆದಿದೆ.
ಚಾರ್ಸಾಲ್ ನಿವಾಸಿ, ಆಟೋ ನಿಲ್ದಾಣದ ರಿಕ್ಷಾ ಚಾಲಕ ವಿಠಲ ನಾಯ್ಕ್ ಹಾಗೂ ಆತನ ಪ್ರೇಯಸಿ ಹೊಸೂರು ಗ್ರಾಮದ ದರುಕೋಡು ನಿವಾಸಿ, ಟೈಲರ್ ವೃತ್ತಿಯ ಭವ್ಯ ಸಮಗಾರ್ತಿ ನೇಣಿಗೆ ಶರಣಾದ ಜೋಡಿಗಳು.

ಏನಿದು ಪ್ರಕರಣ?
ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದ ಕೊಲ್ಲೂರಿನ ಚಾರ್ಸಾಲು ನಿವಾಸಿ ವಿಠಲ ನಾಯ್ಕ್ ವಿವಾಹಿತನಾಗಿದ್ದು ಆತ ತನ್ನ ಗರ್ಭಿಣಿ ಪತ್ನಿ ಹಾಗೂ ಪುತ್ರನೊಂದಿಗೆ ವಾಸಿಸುತ್ತಿದ್ದ. ಈ ನಡುವೆ ಆತನಿಗೆ ಟೈಲರ್ ವೃತ್ತಿ ಮಾಡಿಕೊಂಡಿದ್ದ ಭವ್ಯ ಸಮಗಾರ್ತಿಯೊಂದಿಗೆ ಆತನಿಗೆ ಪರಿಚಯವಾಗಿದ್ದು, ಬಳಿಕ ಅದು ಆತ್ಮೀಯ ಸಂಬAಧಕ್ಕೆ ತಿರುಗಿ ಇವರಿಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಮುಂದುವರಿದಿತ್ತು ಎನ್ನಲಾಗಿದೆ. ಇವರಿಬ್ಬರ ಪ್ರೀತಿ ಗಾಢವಾಗುತ್ತಿದ್ದಂತೆಯೇ ವಿಠಲ ನಾಯ್ಕ್ ತನ್ನ ಪತ್ನಿಯನ್ನು ಹತ್ಯೆಗೈಯಲು ಸಂಚು ರೂಪಿಸಿದ್ದ ಎಂಬ ಆರೋಪವೂ ಕೇಳಿಬಂದಿದೆ. ಗಣೇಶ ಚತುರ್ಥಿಯ ಸಂದರ್ಭದಲ್ಲಿ ವಿಠಲ ನಾಯ್ಕ್ ತನ್ನ ಪತ್ನಿಗೆ ಭವ್ಯಳನ್ನು ನರ್ಸ್ ಎಂದು ಪರಿಚಯಿಸಿದ್ದ ಎನ್ನಲಾಗಿದ್ದು, ಬಳಿಕ ಆಕೆಯ ಮೂಲಕ ವಿಷಕಾರಿ ದ್ರವ್ಯವಿದ್ದ ಸಿರಿಂಜ್ ಅನ್ನು ಪತ್ನಿಗೆ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಯನ್ನು ಸ್ಥಳೀಯರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು.ಬಳಿಕ ಚಿಕಿತ್ಸೆಗೆ ಸ್ಪಂದಿಸಿದ ಪತ್ನಿಯ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಆತಂಕಗೊAಡ ವಿಠಲ ನಾಯ್ಕ್ ಹಾಗೂ ಭವ್ಯ ಇಬ್ಬರೂ ಮೈಸೂರಿಗೆ ಪರಾರಿಯಾಗಿದ್ದರು ಎನ್ನಲಾಗಿದೆ.
ಇತ್ತ ಪತ್ನಿ ಗುಣಮುಖವಾದ ಬಳಿಕ ಹತ್ಯೆ ಸಂಚು ಬಯಲಾಗಿ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ಜೈಲಿಗೆ ಹೋಗಬೇಕಾಗುತ್ತದೆ ಎನ್ನುವ ಭಯದಿಂದ ಮೈಸೂರಿನಿಂದ ಇಬ್ಬರೂ ಕೊಲ್ಲೂರಿಗೆ ಮರಳಿದ್ದು, ಹಾಲ್ಕಲ್ ಸಮೀಪದ ಚಾರ್ಸಾಲ್‌ನ ದಟ್ಟ ಕಾಡಿನಲ್ಲಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಆತ್ಮಹತ್ಯೆ ಪ್ರಕರಣ ತಡವಾಗಿ ಬೆಳಕಿಗೆ ಬಂದ ಹಿನ್ನಲೆಯಲ್ಲಿ ದೇಹಗಳು ಕೊಳೆತು ಗುರುತು ಪತ್ತೆಹಚ್ಚಲು ಕಷ್ಟವಾಗುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 15 ದಿನಗಳ ಹಿಂದೆಯೇ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಹಾಗೂ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿರುವ ಆರೋಪದ ಹಿಂದಿನ ವಾಸ್ತವಾಂಶಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *