

ಕಾರ್ಕಳ,ಸೆ.30:ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ ವತಿಯಿಂದ ನೀಡಲಾಗುವ ಅನುದಾನರಹಿತ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಉಪನ್ಯಾಸಕರು ಆಯ್ಕೆಯಾಗಿದ್ದಾರೆ. ಉಡುಪಿಯ ಹೋಟೆಲ್ ಒಷನ್ಪರ್ಲ್ನಲ್ಲಿ ನಡೆದ KUPMA ಉಡುಪಿ ಜಿಲ್ಲಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಪನ್ಯಾಸಕರ ವೃತ್ತಿಪರ ಅನುಭವ, ಬೋಧನಾ ಕ್ಷೇತ್ರದಲ್ಲಿನ ಕೊಡುಗೆ, ಪ್ರತಿಭೆ ಹಾಗೂ ಸೇವೆಯನ್ನು ಪರಿಗಣಿಸಿ ಐವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಗೆಆಯ್ಕೆಯಾದವರು:
1. ರೇಷ್ಮಾ ಫರ್ನಾಂಡೀಸ್- ಸೆಂಟ್ ಮೇರೀಸ್ಕಾಂಪೋಸಿಟ್ ಪದವಿಪೂರ್ವಕಾಲೇಜು, ಕುಂದಾಪುರ
2. ಸ್ಮಿತಾ ಪದ್ಮಜಾ- ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುನ್ನಾರಿ
3. ಸೌಜನ್ಯಾ ಹೆಗ್ಡೆ- ಜ್ಞಾನಸುಧಾ ಶಿಕ್ಷಣ ಸಂಸ್ಥೆ, ಕಾರ್ಕಳ
4. ಶಕುಂತಲಾ ಪಾಲನ್-ವಿದ್ಯೋದಯ ಶಿಕ್ಷಣ ಸಂಸ್ಥೆ,ಉಡುಪಿ
5. ಲತಾ ಪೈ -ವೆಂಕಟರಮಣ ಶಿಕ್ಷಣ ಸಂಸ್ಥೆ ಕುಂದಾಪುರ
ಆಯ್ಕೆಯಾದ ಉಪನ್ಯಾಸಕರಿಗೆ ಅಕ್ಟೋಬರ್ 3ರಂದು ಸಂಜೆ 4 ಗಂಟೆಗೆಮಣಿಪಾಲದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ರವೀಂದ್ರ ಉಪಾಧ್ಯಯ, KUPMA ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರೊ. ನರೇಂದ್ರಎಲ್. ನಾಯಕ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.
KUPMA ರಾಜ್ಯ ಸಮಿತಿಯ ನಿರ್ದೇಶನದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತ್ಯುತ್ತಮ ಉಪನ್ಯಾಸಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಉಡುಪಿ ಜಿಲ್ಲಾ ಏUPಒಂ ಸಮಿತಿಯಿಂದ ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು ಪ್ರತಿ ವರ್ಷವೂ ಈ ಪ್ರಶಸ್ತಿ ಪ್ರದಾನ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸಿ.ಎ. ಗೊಪಾಲಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಅಶ್ವಥ್ ಎಸ್.ಎಲ್. ತಿಳಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
