

ನವದೆಹಲಿ, ಅ.02: ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಯಕರನ್ನು ಸ್ಮರಿಸಿದ್ದಾರೆ. ಮಹಾತ್ಮ ಗಾಂಧಿಯ ಸತ್ಯ, ಅಹಿಂಸೆ, ಸರಳತೆ ಮತ್ತು ಸೇವೆಯ ಸಂದೇಶಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿ ತೋರಿಸಲಿ.ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ದೇಶ ಸೇವೆಯ ಬದ್ಧತೆ ಸದಾ ಸ್ಫೂರ್ತಿದಾಯಕ ಎಂದು ಅವರು ತಿಳಿಸಿದ್ದಾರೆ.
ಮೋದಿ ತಮ್ಮ ಸಂದೇಶದಲ್ಲಿ, “ಬಾಪು ಅವರ ಶಾಶ್ವತ ಸಂದೇಶವು ಉತ್ತಮ ಸಮಾಜ ಮತ್ತು ವಿಕಸಿತ ಭಾರತ ನಿರ್ಮಾಣದತ್ತ ನಮ್ಮನ್ನು ಮುನ್ನಡೆಸಲಿ” ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರ ಜೀವನದಲ್ಲಿ ಸರಳತೆ, ಧೈರ್ಯ, ಸೇವೆ ಮತ್ತು ಮಾನವೀಯತೆಗೆ ವಿಶೇಷ ಸ್ಥಾನವಿತ್ತು ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿದ ಮೋದಿ, ಅವರ ಸರಳ ಜೀವನ, ಪ್ರಾಮಾಣಿಕತೆ ಮತ್ತು ದೇಶದ ಮೇಲಿನ ಸಮರ್ಪಣೆ ಇಂದಿಗೂ ಜನರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದ್ದಾರೆ. ಶಾಸ್ತ್ರಿಜಿ ನೀಡಿದ ‘ಜೈ ಜವಾನ್, ಜೈ ಕಿಸಾನ್’ ಘೋಷಣೆ ದೇಶದ ಸೈನಿಕರು ಮತ್ತು ರೈತರ ಮಹತ್ವವನ್ನು ಪ್ರತಿಬಿಂಬಿಸುತ್ತದೆ.
ಗಾAಧೀಜಿಯವರ ವಿಚಾರಗಳಲ್ಲಿ ಸತ್ಯ, ಅಹಿಂಸೆ, ಸ್ವಚ್ಛತೆ, ಸ್ವದೇಶಿ ಮತ್ತು ಮಾನವೀಯತೆ ಪ್ರಮುಖವಾಗಿದ್ದರೆ, ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ಮತ್ತು ದೇಶ ಸೇವೆಗೆ ಹೆಸರುವಾಸಿಯಾಗಿದ್ದಾರೆ. ಇಬ್ಬರ ಆದರ್ಶಗಳನ್ನು ಇಂದಿನ ಭಾರತದಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಮೋದಿ ತಮ್ಮ ಸಂದೇಶದ ಮೂಲಕ ಒತ್ತಿ ಹೇಳಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
