

ಕಾರ್ಕಳ, ಅ.03: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಮಾಜಿ ಸಚಿವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ,ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯು ಅ.5ರಂದು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದು, ರಾಜ್ಯ ಸರ್ಕಾರದ ಆಡಳಿತದಲ್ಲಿ ಬಡವರು, ರೈತರು ಹಾಗೂ ಮಧ್ಯಮ ವರ್ಗದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಬಿಪಿಎಲ್ ಪಡಿತರ ಚೀಟಿಗಳ ರದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶದ ನಿರಾಕರಣೆ, 94ಸಿ ಹಾಗೂ ಬಗರ್ಹುಕುಂ ಅಕ್ರಮ-ಸಕ್ರಮ ಅರ್ಜಿಗಳ ತಿರಸ್ಕಾರ, ಸಾಮಾಜಿಕ ಭದ್ರತಾ ಪಿಂಚಣಿಗಳ ಕಡಿತ, ಇ-ಸ್ವತ್ತು, ಖಾತಾ ಹಾಗೂ ಏಕವಿನ್ಯಾಸ ಅನುಮೋದನೆಗೆ ಸಂಬAಧಿಸಿದ ಸಮಸ್ಯೆಗಳು, ವಿದ್ಯುತ್ ದರ ಏರಿಕೆ ಮತ್ತು ಅಘೋಷಿತ ವಿದ್ಯುತ್ ಕಡಿತ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊAಡು ಪ್ರತಿಭಟನೆ ನಡೆಸಲಾಗುತ್ತಿದೆ.
ಕಾರ್ಕಳ ತಾಲೂಕಿನಲ್ಲಿ 1,000ಕ್ಕೂ ಅಧಿಕ ಬಿಪಿಎಲ್ ಕಾರ್ಡ್ಗಳು ರದ್ದಾಗಿರುವುದು, 10,090ಕ್ಕೂ ಅಧಿಕ ಅಕ್ರಮ-ಸಕ್ರಮ ಅರ್ಜಿಗಳು ತಿರಸ್ಕೃತವಾಗಿರುವುದು ಹಾಗೂ 10,732ಕ್ಕೂ ಅಧಿಕ ಸಾಮಾಜಿಕ ಭದ್ರತಾ ಪಿಂಚಣಿಗಳ ವಿಚಾರ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ, ಮೂಲಸೌಕರ್ಯ, ಬಡವರ ವಸತಿ ಹಾಗೂ ಸಾರ್ವಜನಿಕರ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬAಧಿಸಿದ ಸಮಸ್ಯೆಗಳ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ನವೀನ್ ನಾಯಕ್ ತಿಳಿಸಿದ್ದಾರೆ.
ಇದು ಕೇವಲ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲ. ಸರ್ಕಾರದ ವಿವಿಧ ನಿರ್ಧಾರಗಳಿಂದ ಸಮಸ್ಯೆ ಎದುರಿಸುತ್ತಿರುವ ಬಡವರು, ರೈತರು, ಫಲಾನುಭವಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟವಾಗಿದೆ. ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖ ಮುಖಂಡರು ಭಾಗವಹಿಸುವ ಈ ಪ್ರತಿಭಟನೆಗೆ ಕಾರ್ಕಳ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದಾ ನಗುಮೊಗದ ಸೇವೆಯ ಜೊತೆಗೆ ಗ್ರಾಹಕರಿಗೆ ಗುಣಮಟ್ಟದ ವಸ್ತುಗಳನ್ನು ನೀಡಬೇಕು ಎನ್ನುವ ಬದ್ಧತೆಯೊಂದಿಗೆ ಕಾರ್ಯಾಚರಿಸುತ್ತಿರುವ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಾರ್ಕಳ ನಗರ ಹಾಗೂ ತಾಲೂಕಿನ ಗ್ರಾಹಕರ ಖರೀದಿಯ ನೆಚ್ಚಿನ ಮಾರ್ಟ್ ಆಗಿದೆ. ಒಂದೇ ಸೂರಿನಡಿ ದಿನಬಳಕೆಯ ಎಲ್ಲಾ ಸಾಮಾಗ್ರಿಗಳು ಲಭ್ಯವಿದೆ.ಮಾತ್ರವಲ್ಲದೇ ಯಾವುದೇ ವಸ್ತುಗಳ ಬೆಲೆ, ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸುವ ಅವಕಾಶವಿದೆ. ಆದ್ದರಿಂದ ಈ ವರ್ಷದ ಸಾಲು ಸಾಲು ಹಬ್ಬಗಳನ್ನು ನಿಮ್ಮ ರಿಯಲನ್ಸ್ ಸಾರ್ಟ್ ಬಜಾರ್ ನಲ್ಲಿ ಆಚರಿಸಿಕೊಳ್ಳುವ ಅವಕಾಶ ಕಳದುಕೊಳ್ಳಬೇಡಿ. ಕುಟುಂಬದೊAದಿಗೆ ಬಂದು ಶಾಪಿಂಗ್ ಮಾಡಿ ಅದ್ಭುತ ಅನುಭವ ಪಡೆಯಿರಿ.
(ಜಾಹೀರಾತು)





.
.
.
.
.
.
.
.
.
.
.
.
.
.
.
.
.
.
.
.
