Share this news

ನವದೆಹಲಿ, ಅ.07: ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. 2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರು, ಸುಮಾರು 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2014ರಲ್ಲಿ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, 2019 ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಿ ಅವರು ಪ್ರಧಾನಿಯಾಗಿ ಮುಂದುವರೆದರು.
ನರೇAದ್ರ ದಾಮೋದರದಾಸ್ ಮೋದಿ ಅವರು ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಮೂರು ಬಾರಿ ದೇಶದ ಪ್ರಧಾನಿಯಾಗಿ ಸತತ 25 ವರ್ಷಗಳ ಆಡಳಿತವನ್ನು ಪೂರೈಸಿದ್ದಾರೆ. ಈ ಅವಧಿಯಲ್ಲಿ ಗುಜರಾತ್ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸಿ, ನಂತರ ರಾಷ್ಟ್ರೀಯ ರಾಜಕಾರಣದಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದ್ದಾರೆ.

‘ನಾನು ರಾಜಕೀಯ ಮಹತ್ವಾಕಾಂಕ್ಷೆಗಾಗಿ ಬದುಕುವ ವ್ಯಕ್ತಿಯಲ್ಲ, ದೇಶಸೇವೆಯ ಮಿಷನ್‌ಗಾಗಿ ಬಂದವನು ನನಗೆ ದೊರೆತ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯವಾಗಿದೆ’’ ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿ ನುಡಿದಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಬೃಹತ್ ‘ವಿಕಸಿತ ಭಾರತ ಸಂಕಲ್ಪ ಸಭೆ’ಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳನ್ನು ಪೂರೈಸಿದ ತಮ್ಮ ಸುದೀರ್ಘ ರಾಜಕೀಯ ಪಯಣದ ಅನುಭವಗಳನ್ನು ಹಂಚಿಕೊಂಡರು.

ಗುಜರಾತ್ ಮುಖ್ಯಮಂತ್ರಿಯಾಗಿ ವಾಸ್ಮೋ, ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆ, ಜ್ಯೋತಿಗ್ರಾಂ ಯೋಜನೆ ಮತ್ತು ವೈಬ್ರೆಂಟ್ ಗುಜರಾತ್‌ನಂತಹ ಯೋಜನೆಗಳ ಮೂಲಕ ಗಮನ ಸೆಳೆದರು. 2014ರಲ್ಲಿ ಪ್ರಧಾನಿಯಾದ ನಂತರ, 2019 ಮತ್ತು 2024ರಲ್ಲಿ ಸತತವಾಗಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದಾರೆ. ಅವರ ಆಡಳಿತದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ, ತ್ರಿವಳಿ ತಲಾಖ್ ನಿಷೇಧ, ಅಯೋಧ್ಯೆ ರಾಮಮಂದಿರ ನಿರ್ಮಾಣ, ಮಹಿಳಾ ಮೀಸಲಾತಿ ಮಸೂದೆ ಮತ್ತು ಭಾರತೀಯ ನ್ಯಾಯ ಸಂಹಿತೆ ಜಾರಿಯಂತಹ ಅನೇಕ ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಆರ್ಥಿಕ ಕ್ಷೇತ್ರದಲ್ಲಿ ನೀತಿ ಆಯೋಗ ಸ್ಥಾಪನೆ, ಜಿಎಸ್‌ಟಿ ಜಾರಿ, ಡಿಜಿಟಲ್ ಇಂಡಿಯಾ ಕ್ರಾಂತಿ ಮತ್ತು ಆತ್ಮನಿರ್ಭರ್ ಭಾರತ್‌ನಂತಹ ಯೋಜನೆಗಳನ್ನು ತಂದಿದ್ದಾರೆ. ರಾಷ್ಟ್ರೀಯ ಭದ್ರತೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ಮತ್ತು ಏರ್‌ಸ್ಟ್ರೈಕ್ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಸ್ವಚ್ಛ ಭಾರತ್, ಜನ್‌ಧನ್, ಆಯುಷ್ಮಾನ್ ಭಾರತ್, ಜಲಜೀವನ್ ಮಿಷನ್ ಮತ್ತು ಉಜ್ವಲ ಯೋಜನೆಯಂತಹ ಜನಕಲ್ಯಾಣ ಯೋಜನೆಗಳು ಕೋಟ್ಯಂತರ ಜನರ ಬದುಕನ್ನು ಸುಧಾರಿಸಿವೆ. ಮೋದಿ ಅವರ 25 ವರ್ಷಗಳ ಆಡಳಿತ ಭಾರತದ ರಾಜಕಾರಣದಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ.

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *