

ಬೆಂಗಳೂರು,ಅ.10: ಫೇಸ್‌ಬುಕ್ ಪೋಸ್ಟ್ನಲ್ಲಿ ‘ಜಿಹಾದಿ’ ಮತ್ತು ‘ಕಾಫೀರ’ ಎಂಬ ಪದಗಳನ್ನು ಬಳಸಿದ ತಕ್ಷಣಕ್ಕೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಅಥವಾ ವಿವಿಧ ಸಮುದಾಯಗಳ ನಡುವೆ ದ್ವೇಷಪ್ರಚೋದಿಸಿದ ಅಪರಾಧ ಸಾಬೀತಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ‘ಹಿಂದೂ ಸಾಮ್ರಾಟ್ ಧರ್ಮಸೇನೆ’ ಎಂಬ ಫೇಸ್‌ಬುಕ್ ಪುಟದಲ್ಲಿ ಪ್ರಕಟವಾಗಿದ್ದ ಕಾಮೆಂಟ್ ಕುರಿತು ಮಧುಗಿರಿಯ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ನ್ಯಾಯಪೀಠವು ಈ ಆದೇಶ ನೀಡಿದೆ.
ಈ ಪ್ರಕರಣಕ್ಕೆ ಸಂಬAಧಿಸಿದAತೆ ಅತುಲ್ ಕುಮಾರ್ ಸಬರ್ವಾಲ್ ಅಲಿಯಾಸ್ ಮಧುಗಿರಿ ಮೋದಿ ಎಂಬುವರು ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಹಾಗೂ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಅರ್ಜಿದಾರರ ಮೇಲಿದ್ದ ಎಫ್‌ಐಆರ್ ಹಾಗೂ ವಿಚಾರಣಾ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಅರ್ಜಿಯನ್ನು ಪುರಸ್ಕರಿಸಿದೆ. ‘ಜಿಹಾದಿ’ ಅಥವಾ ‘ಕಾಫೀರ’ ಪದಗಳ ಬಳಕೆ ಯಾವುದೇ ಸಂದರ್ಭದಲ್ಲೂ ಅಪರಾಧವಾಗುವುದಿಲ್ಲ ಎಂಬ ಯಾವುದೇ ಸಾರ್ವತ್ರಿಕ ನಿಯಮ ಅಥವಾ ಸೂತ್ರವನ್ನು ಹೈಕೋರ್ಟ್ ರೂಪಿಸುತ್ತಿಲ್ಲ ಎಂದು ಹೇಳಿದೆ. ಈ ನಿರ್ದಿಷ್ಟ ಪ್ರಕರಣದಲ್ಲಿ ಹಂಚಿಕೊಳ್ಳಲಾಗಿದ್ದ ಪೋಸ್ಟ್ನ ಪೂರ್ಣ ವಿಷಯ, ಅದರ ಸಂದರ್ಭ ಹಾಗೂ ಕಾನೂನಿನ ಅಗತ್ಯ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಈ ತೀರ್ಪು ನೀಡಲಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
