

ಕಾರ್ಕಳ,ಅ.10: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ನಂದನ್ ಆರ್, ರಾಹುಲ್ ಜಿ ಎನ್, ರಿಷಿ ಎಸ್ ಶೆಟ್ಟಿ, ಸುಮಿತ್ ಎಸ್ ಪ್ರಭು, ಚಿಂತನ್ ಎಮ್ ಹೆಗ್ಡೆ, ಪ್ರಣಮ ಎಚ್ .ಡಿ., ಮಿಹಿರ್ ಹೆಗ್ಡೆ, ಯು.ಶ್ರೀಶ ಮೈಪಾಡಿ, ಯಶಸ್ಆರ್. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.
ರಾಷ್ಟ್ರವ್ಯಾಪಿ ನಡೆದ ಈ ಪರೀಕ್ಷೆಯಲ್ಲಿ ಒಟ್ಟಾರೆ 7406 ಮಂದಿ ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದು ಅದರಲ್ಲಿ 9 ಮಂದಿ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯಿಂದ ಆಯ್ಕೆಗೊಂಡಿರುವುದು ಅತೀ ವಸಂತೋಷವನ್ನುಂಟುಮಾಡಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತಮಂಡಳಿ,ಉಪನ್ಯಾಸಕವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತಾಮ್ಲೆಅಭಿನಂದನೆಗಳನ್ನು ಸಲ್ಲಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
