

ಬೆಂಗಳೂರು,ಅ.11: ಪ್ರತೀ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಯ ಅಂತಿಮ ಗಡುವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ನಿರಂತರವಾಗಿ ಸಿಗುವಂತೆ ಮಾಡಲು ಹಾಗೂ ತಾಂತ್ರಿಕ ಕಾರಣಗಳಿಂದ ಪರಿಶೀಲನೆಯಿಂದ ಬಾಕಿ ಉಳಿದಿರುವ ಸಾರ್ವಜನಿಕರಿಗೆ ಸೂಕ್ತ ಅವಕಾಶ ಕಲ್ಪಿಸಲು ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯಾದ್ಯAತ ಎಸ್ಕಾಂ ವ್ಯಾಪ್ತಿಯಲ್ಲಿ ಹಲವು ಮನೆಗಳು ಬಾಗಿಲು ಹಾಕಿದ್ದರಿಂದ ಹಾಗೂ ಕೆಲ ಅಪಾರ್ಟ್ಮೆಂಟ್‌ಗಳ ನಿವಾಸಿಗಳು ಸಮಯಕ್ಕೆ ಸರಿಯಾಗಿ ಲಭ್ಯವಿಲ್ಲದ ಕಾರಣದಿಂದಾಗಿ ಹಲವೆಡೆ ಮರುಪರಿಶೀಲನೆ ಸಮೀಕ್ಷೆ ಪೂರ್ಣಗೊಂಡಿರಲಿಲ್ಲ. ಹೀಗಾಗಿ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿದಾಗ ಆಧಾರ್, ಮತದಾರರ ಗುರುತಿನ ಚೀಟಿ ಮತ್ತು ವಿದ್ಯುತ್ ಖಾತೆ ಸಂಖ್ಯೆಯ ದಾಖಲೆಗಳನ್ನು ನೀಡಿ ಮರುಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಇಂಧನ ಇಲಾಖೆ ಮನವಿ ಮಾಡಿದೆ. ನಿಗದಿತ ದಿನಾಂಕದೊಳಗೆ ಮರುಪರಿಶೀಲನೆ ಮುಗಿಸಿಕೊಂಡಲ್ಲಿ ಉಚಿತ ಯೋಜನೆ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
