

ಬೆಂಗಳೂರು,ಅ.12: ಗ್ರಾಮೀಣ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ವೃತ್ತಿಪರ ಕೋರ್ಸ್ ಗಳಿಗೆ ಶೇ.7.5ರಷ್ಟು ಪ್ರತ್ಯೇಕ ಮೀಸಲಾತಿ ಜಾರಿಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುನೀತಾ ಆರ್. ಬಿದರಿ ಅವರು ಅಧಿಕೃತ ರಾಜ್ಯಪತ್ರದ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಜ್ಯದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗುತ್ತಿದ್ದ ಶೇ. 15ರ ಮೀಸಲಾತಿಯ ನಿಯಮಗಳಲ್ಲಿ ಮಹತ್ವದ ತಿದ್ದುಪಡಿ ಮಾಡಿದ್ದು, ಇನ್ನು ಶೇ.15ರಷ್ಟು ಮೀಸಲಾತಿ ಕೊಟಾದಲ್ಲಿ ಹಳ್ಳಿಯ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಶೇ.7.5 ರಷ್ಟು ಮೀಸಲಾತಿ ಸಿಗಲಿದೆ.
ಹೊಸ ನಿಯಮದ ಪ್ರಕಾರ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಮಗಳು-2026ರ ನಿಯಮ 9ಕ್ಕೆ ತಿದ್ದುಪಡಿ ಮಾಡಿದ್ದು, ಗ್ರಾಮೀಣ ಕೋಟಾದ ಶೇ. 15ರಷ್ಟು ಸೀಟುಗಳು 7.5% + 7.5% ರಂತೆ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಕರ್ನಾಟಕ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ 1-10 ತರಗತಿ ಓದಿರಬೇಕು. ಗ್ರಾಮೀಣ ಭಾಗದ ಕಾಲೇಜುಗಳಲ್ಲಿ ಪಿಯು ವ್ಯಾಸಾಂಗ ಮಾಡಿರಬೇಕು. ಕರ್ನಾಟಕ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಓದಿರಬೇಕು. ಖಾಸಗಿ ಅಥವಾ ಅನುದಾನಿತ ಶಾಲೆಗಳಲ್ಲಿ ಹತ್ತನೇ ತರಗತಿವರಿಗೆ ವ್ಯಾಸಂಗ ಮಾಡಿರಬೇಕು.
ರಾಜ್ಯ ಸರ್ಕಾರದ ಈ ಮಹತ್ವದ ತಿದ್ದುಪಡಿಯಿಂದ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಬಡ ಮಾಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲಿಯಲು ಅವಕಾಶ ದೊರೆಯಲಿದ್ದು, ಈ ತಿದ್ದುಪಡಿ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿAದಲೇ ಜಾರಿಗೆ ಬರಲಿದೆ.






.
.
.
.
.
.
.
.
.
.
.
.
.
.
.
.
.
.
.
.
