Share this news

 

ಮಂಗಳೂರು,ಅ.12: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಸಂಘಟನೆ ತೀವೃ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಖ್ಯಾತ ಸ್ವಾಯತ್ತ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12 ರಿಂದ ಅಕ್ಟೋಬರ್ 28ರ ವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಕರಾವಳಿಯ ದೊಡ್ಡ ಹಬ್ಬವಾದ ಮಂಗಳೂರು ದಸರಾ ಸಂಭ್ರಮದ ನಡುವೆಯೇ ಪರೀಕ್ಷೆ ಇಟ್ಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ನೂರಾರು ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆಗೆ ಇಳಿದಿದ್ದಾರೆ. ಬೇರೆಲ್ಲಾ ಕಾಲೇಜುಗಳಿಗೆ ದಸರಾ ರಜೆ ಇರುತ್ತದೆ. ಅಲ್ಲದೆ ಪರೀಕ್ಷೆ ಮುಂದೂಡುವAತೆ ಕಾಲೇಜು ಆಡಳಿತ ಮಂಡಳಿಗೆ ಮುಂಚಿತವಾಗಿಯೇ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಈ ಶಿಕ್ಷಣ ಸಂಸ್ಥೆಯಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ರಜೆ ನೀಡಲಾಗುತ್ತದೆ, ಆದರೆ ದಸರಾ ಹಬ್ಬಕ್ಕೆ ರಜೆ ನೀಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿ ವಿದ್ಯಾರ್ಥಿ ನಾಯಕರನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕರೆದೊಯ್ಯಲು ಯತ್ನಿಸಿದರು. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಪೊಲೀಸ್ ಜೀಪ್‌ಗೆ ಅಡ್ಡಲಾಗಿ ನಿಂತು, ರಸ್ತೆಯಲ್ಲೇ ಮಲಗಿ ಪ್ರತಿರೋಧ ಒಡ್ಡಿದರು. ಡಿಸಿಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರೂ, ವಿದ್ಯಾರ್ಥಿಗಳು ಜೀಪ್ ಎದುರೇ ಮಲಗಿ ನಾಯಕರ ಬಿಡುಗಡೆಗೆ ಪಟ್ಟು ಹಿಡಿದರು.ಎಬಿವಿಪಿ ನಾಯಕರನ್ನು ಬಿಡುಗಡೆ ಮಾಡುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಗೇಟ್ ಎದುರು ಪೊಲೀಸರಿಗೆ ಸವಾಲು ಹಾಕಿ ಪ್ರತಿಭಟನೆ ಮುಂದುವರಿಸಿದ್ದಾರೆ.

ದಸರಾ ರಜೆ ಅವಧಿಯಲ್ಲಿ ಪರೀಕ್ಷೆ ನಡೆಸುತ್ತಿರುವ ಕಾಲೇಜು ಆಡಳಿತ ಮಂಡಳಿಯ ಧೋರಣೆಯ ವಿರುದ್ಧ ವಿದ್ಯಾರ್ಥಿಗಳು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ಅಧಿಕೃತ ದೂರು ನೀಡಿದ್ದಾರೆ. ದಸರಾ ರಜೆ ಹೊತ್ತಿನಲ್ಲಿ ಹಬ್ಬದ ಉತ್ಸಾಹಕ್ಕೆ ತಣ್ಣೀರು ಎರಚಿರುವ ಕಾಲೇಜು ಆಡಳಿತದ ಈ ಧೋರಣೆ ವಿರುದ್ಧ ಶೈಕ್ಷಣಿಕ ವಲಯದಲ್ಲಿಯೂ ಚರ್ಚೆ ಹುಟ್ಟುಹಾಕಿದೆ.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *