

ಕಾರ್ಕಳ,ಅ.12: ದಸರಾ ಹಬ್ಬದ ಸಂದರ್ಭದಲ್ಲಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಪೋಲಿಸರು ನಡೆಸಿದ ದೌರ್ಜನ್ಯ ಅತ್ಯಂತ ಖಂಡನೀಯ. ಹಿಂದೂಗಳ ಹಬ್ಬವಾದ ದಸರಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ತಪ್ಪು ಆದ್ದರಿಂದ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಯುವಮೋರ್ಚಾ ಬೆಂಬಲ ನೀಡಲಿದೆ ಎಂದು ಕಾರ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಹೇಳಿದ್ದಾರೆ.
ಅಕ್ಟೋಬರ್ 12ರಿಂದ 28ರವರೆಗೆ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ ದಸರಾ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ತೊಂದರೆಯಾಗುತ್ತಿದೆ, ಈ ಹಿನ್ನೆಲೆಯಲ್ಲಿ ABVP ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪರೀಕ್ಷೆಗಳನ್ನು ಮುಂದೂಡುವAತೆ ಆಗ್ರಹಿಸಿ ನಡೆಸಿದ ಶಾಂತಿಯುತ ಧರಣಿಗೆ ಅಡ್ಡಿಪಡಿಸಿರುವುದು ಖಂಡನೀಯ.
ದಸರಾ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬವಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಕುಟುಂಬದೊAದಿಗೆ ಹಬ್ಬ ಆಚರಿಸುವ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನೂ ಹೊಂದಿರಬೇಕು. ಆದ್ದರಿಂದ ವಿದ್ಯಾರ್ಥಿಗಳ ಮನವಿಯನ್ನು ಕಾಲೇಜು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ, ಪರೀಕ್ಷಾ ವೇಳಾಪಟ್ಟಿಯನ್ನು ಮರುಪರಿಶೀಲಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಪರೀಕ್ಷೆ ಮುಂದೂಡುವ ಸಾಧ್ಯತೆಗಳ ಕುರಿತು ಸಂಬAಧಪಟ್ಟ ಅಧಿಕಾರಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಅವರ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ರಾಕೇಶ್ ಶೆಟ್ಟಿ ಕುಕ್ಕುಂದೂರು ಒತ್ತಾಯಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
