

ನವದೆಹಲಿ,ಅ.15: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿನ ಅಕ್ರಮ ಹಾಗೂ ಕೋಟ್ಯಂತರ ಮತದಾರರ ಹೆಸರು ಡಿಲೀಟ್ ಆಗಿರುವ ವಿವಾದಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಇಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ಮೂವರಿಗೆ ಮಹತ್ವದ ನೋಟಿಸ್ ಜಾರಿ ಮಾಡಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರು ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೊಂದಿಗೆ ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಗೂ ನೋಟಿಸ್ ನೀಡಿ ಉತ್ತರ ಕೇಳಿದೆ.
ದೇಶಾದ್ಯಂತ ಎಸ್ಐಆರ್ ಪ್ರಕ್ರಿಯೆಯಡಿ ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಯಾವುದೇ ಸೂಕ್ತ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ನಿರಂಕುಶವಾಗಿ ಕೈಬಿಡಲಾಗಿದೆ ಎಂದು ವಿರೋಧ ಪಕ್ಷಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು.
ಇದೇ ವೇಳೆ, ಅಕ್ಟೋಬರ್ 12 ರಂದು ಸುಪ್ರೀಂ ಕೋರ್ಟ್ ಆವರಣದತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ವಿರೋಧ ಪಕ್ಷದ ನಾಯಕರ ನಡವಳಿಕೆಯನ್ನು ಪೀಠವು ತೀವ್ರವಾಗಿ ಪ್ರಶ್ನಿಸಿದೆ. ನ್ಯಾಯಾಂಗವನ್ನು ಯಾವುದೇ ರೀತಿಯಲ್ಲೂ “ಬೆದರಿಸಲು ಅಥವಾ ಒತ್ತಡಕ್ಕೊಳಗಾಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿರುವ ಕೋರ್ಟ್, ಈ ನಡವಳಿಕೆ ಕುರಿತು ವಿವರಣೆ ನೀಡುವಂತೆ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಅವರಿಗೂ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಅಕ್ಟೋಬರ್ ಆರಂಭದಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತ ಹುದ್ದೆಯಿಂದ ತಕ್ಷಣವೇ ಅಮಾನತುಗೊಳಿಸಲು ನಿರಾಕರಿಸಿತ್ತು. ಆದರೆ ಆಯೋಗದ ನಿರ್ಧಾರಗಳ ಕುರಿತು ಪರಿಶೀಲಿಸುವುದಾಗಿ ತಿಳಿಸಿತ್ತು.






.
.
.
.
.
.
.
.
.
.
.
.
.
.
.
.
.
.
.
.
