

ಬೆಂಗಳೂರು, ಅ.20: ವಿಶಾಖಪಟ್ಟಣಂನಿAದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 148 ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೂ, ಯಾವುದೇ ಅನಾಹುತ ಸಂಭವಿಸದAತೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ವಿಮಾನವನ್ನು ಸದ್ಯ ವಿಮಾನ ನಿಲ್ದಾಣದV49 ಸ್ಟ್ಯಾಂಡ್ನಲ್ಲಿ ನಿಲ್ಲಿಸಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
