

ಬೆಂಗಳೂರು, ಅ.21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಸರಾ ಹಬ್ಬದ ಸಂದರ್ಭದಲ್ಲೇ ನಿಗೂಢ ಸ್ಪೋಟ ಸಂಭವಿಸಿದ್ದು, ಜನರು ಆಂತಕಗೊAಡಿದ್ದಾರೆ. ಪುಲಕೇಶಿನಗರದ ಜೆರ್ಮಿಯಾ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಮಂಗಳವಾರ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಅಲ್ಲಾವುದ್ದೀನ್ ಮತ್ತು ಸೂರಜ್ ಎಂಬ ಇಬ್ಬರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಮಿಕರಿಗೆ ರಸ್ತೆ ಬದಿಯಲ್ಲಿ ಒಂದು ಬ್ಯಾಗ್ ಸಿಕ್ಕಿದ್ದು, ಅದನ್ನು ಅವರು ಕಟ್ಟಡದ ನಾಲ್ಕನೇ ಮಹಡಿಗೆ ತಂದು ತೆರೆದಾಗ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬ್ಯಾಗ್ನೊಳಗೆ ಬ್ಯಾಟರಿ ಮಾದರಿಯ ವಸ್ತು ಇತ್ತು ಎನ್ನಲಾಗಿದ್ದು, ತನಿಖೆ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಭಯೋತ್ಪಾದನಾ ನಿಗ್ರಹ ದಳ, ಆಂತರಿಕ ಭದ್ರತಾ ವಿಭಾಗ ಮತ್ತು ಬಾಂಬ್ ಪತ್ತೆ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಐಇಡಿ ಕಾರಣವೇ ಅಥವಾ ಯಾವುದಾದರೂ ರಾಸಾಯನಿಕ ಪ್ರಕ್ರಿಯೆಯೇ ಎಂಬುದನ್ನು ಪತ್ತೆ ಹಚ್ಚಲು ವಸ್ತುಗಳ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
