

ಬೆಂಗಳೂರು,ಅ.21: ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ 750 ಫಾರೆಸ್ಟ್ ವಾಚರ್ (ಅರಣ್ಯ ವೀಕ್ಷಕರು) ಹುದ್ದೆಗೆ ನಿಗದಿಪಡಿಸಲಾಗಿದ್ದ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಇದೀಗ ಅಕ್ಟೋಬರ್ 30 ರವರೆಗೆ ವಿಸ್ತರಿಸಿದೆ. ಈ ಮೂಲಕ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅರಣ್ಯ ವೃತ್ತಗಳಲ್ಲಿ ಒಟ್ಟು 750 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿAದ 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ನೇಮಕಾತಿಯ ಪ್ರಮುಖ ಅನುಕೂಲವೆಂದರೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳು ಸಂಪೂರ್ಣವಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆಯು ಅರಣ್ಯ ಇಲಾಖೆಯ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ ನಿರ್ಧಾರವಾಗಲಿದೆ.
ಈ ನೇಮಕಾತಿಯ ಅತ್ಯಂತ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಪ್ರಥಮ ಹಂತದ ಆಯ್ಕೆಯನ್ನು ಮಾಡಲಾಗುತ್ತದೆ. ತದನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅಂತಿಮವಾಗಿ ಹುದ್ದೆಗೆ ನಿಯೋಜಿಸಲಾಗುತ್ತದೆ.






.
.
.
.
.
.
.
.
.
.
.
.
.
.
.
.
.
.
.
.
