

ಬೆಂಗಳೂರು, ಅ.22: ಬೆಂಗಳೂರಿನ ಪುಲಕೇಶಿನಗರದಲ್ಲಿ ನಡೆದ ಅನುಮಾನಾಸ್ಪದ ಸ್ಫೋಟ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ಮಾಹಿತಿ ಪಡೆದುಕೊಂಡಿದ್ದು, ತನಿಖಾ ವರದಿಗಳನ್ನು ಕೇಳಿದೆ. ಪ್ರಾಥಮಿಕ ತನಿಖೆಯಲ್ಲಿ, ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಸ್ಥಳ ಪರಿಶೀಲನೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯಲ್ಲಿ ಎನ್ಐಎ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.ನಿನ್ನೆ (ಅ.21) ಪುಲಿಕೇಶಿನಗರದ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿತ್ತು. ಬ್ಯಾಟರಿ ಆನ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಅಲ್ಲಾವುದ್ದೀನ್ ಮತ್ತು ನರೇಶ್ ಎಂಬ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು.
ಘಟನೆಗೆ ಸಂಬAಧಿಸಿದAತೆ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್ಎಸ್ಎಲ್ ತಜ್ಞರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಫೋಟದ ಮಾದರಿಗಳನ್ನು ಸಂಗ್ರಹಿಸಿ, ಪ್ರಕರಣದ ತನಿಖೆಗಾಗಿ ವಿಶೇಷ ತಂಡಗಳನ್ನೂ ರಚಿಸಲಾಗಿತ್ತು.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೂರು ಬ್ಯಾಟರಿಗಳನ್ನು ಬಳಸಿ ಸ್ಫೋಟಕ ಸಾಧನವನ್ನು ಸ್ಫೋಟಿಸಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಸ್ಫೋಟದ ನಿಖರ ಸ್ವರೂಪ ಮತ್ತು ಬಳಸಲಾಗಿರುವ ವಸ್ತುಗಳ ಬಗ್ಗೆ ವಿಧಿವಿಜ್ಞಾನ ವರದಿಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಕಟ್ಟಡದೊಳಗೆ ಪಾರ್ಸೆಲ್ ಇಡಲು ಸೆಕ್ಯುರಿಟಿ ಗಾರ್ಡ್ ಮುಂದಾಗಿದ್ದ. ತನಗೆ ಅನಾಮಧೇಯ ಕರೆ ಬಂದಿದ್ದು, ಪಾರ್ಸೆಲ್ ಅನ್ನು ಕಟ್ಟಡದ ಒಳಗೆ ಇಡುವಂತೆ ಸೂಚಿಸಲಾಗಿತ್ತು ಎಂದು ಸೆಕ್ಯುರಿಟಿ ಗಾರ್ಡ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಸೆಕ್ಯುರಿಟಿ ಗಾರ್ಡ್ ಮತ್ತು ಪೇಂಟರ್ ಇಬ್ಬರೂ ಸೇರಿ ಪಾರ್ಸೆಲ್ ತೆರೆಯಲು ಮುಂದಾದಾಗ ಸ್ಫೋಟ ಸಂಭವಿಸಿದೆ ಎಂದು ಇಬ್ಬರೂ ತಿಳಿಸಿದ್ದಾರೆ. ಅನಾಮಧೇಯ ಕರೆ, ಪಾರ್ಸೆಲ್ನ ಮೂಲ ಹಾಗೂ ಸ್ಫೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
